ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಿಕ್ಷಣ ಇಲಾಖೆಯಲ್ಲಿ 33 ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದು, ಒಟ್ಟು 2,257 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1,759 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡ 55.78% ರಷ್ಟು ಫಲಿತಾಂಶ ಬಂದಿರುತ್ತದೆ.
ಬಿಬಿಎಂಪಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದಂತಹ ವಿದ್ಯಾರ್ಥಿಗಳ ಪೈಕಿ 78 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
* ಬಿಬಿಎಂಪಿ ಬಸವನಗುಡಿ ಪ್ರೌಢಶಾಲೆಯು ಶೇ. 100 ರಷ್ಟು ಫಲಿತಾಂಶವನ್ನು ನೀಡಿ ಅಗ್ರಸ್ಥಾನ ಪಡೆದು ಪಾಲಿಕೆಗೆ ಕೀರ್ತಿ ತಂದಿದ್ದಾರೆ.
* ಬಿಬಿಎಂಪಿ ಶಾಂತಿ ನಗರ ಪ್ರೌಢಶಾಲೆಯು ಶೇ. 88.89 ರಷ್ಟು ಫಲಿತಾಂಶವನ್ನು ನೀಡಿ ಎರಡನೇ ಸ್ಥಾನವನ್ನು ಪಡೆದಿದೆ.
* ಬಿಬಿಎಂಪಿ ಶ್ರೀರಾಮಪುರ ಪ್ರೌಢಶಾಲೆಯು ಶೇ. 86.21 ರಷ್ಟು ಫಲಿತಾಂಶವನ್ನು ನೀಡಿ ಮೂರನೇ ಸ್ಥಾನವನ್ನು ಪಡೆದಿದೆ.
* 2024-25 ನೇ ಸಾಲಿನಲ್ಲಿ ಒಟ್ಟು 78 ವಿದ್ಯಾರ್ಥಿಗಳು ಶೇ. 85 ಕ್ಕಿಂತ ಹೆಚ್ಚು ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
* ಹೇರೋಹಳ್ಳಿ ಪ್ರೌಢಶಾಲೆಯ ಕು|| ಶಾಲಿನಿ ಬಿ.ಆರ್ ರವರು 625 ಕ್ಕೆ 614 ಅಂಕಗಳನ್ನು ಪಡೆದು ಶೇ. 98.24 ರಷ್ಟು ಅಂಕಗಳನ್ನು ಗಳಿಸಿ ಪಾಲಿಕೆಗೆ ಕೀರ್ತಿ ತಂದಿರುತ್ತಾರೆ.
* ಶ್ರೀರಾಮಪುರ ಪ್ರೌಢಶಾಲೆಯ ಕು|| ರಾಜೇಶ್ವರಿ ಡಿ, ರವರು ರವರು 625 ಕ್ಕೆ 610 ಅಂಕಗಳನ್ನು ಪಡೆದು ಶೇ. 97.60 ರಷ್ಟು ಅಂಕಗಳನ್ನು ಗಳಿಸಿ ಪಾಲಿಕೆಗೆ ಕೀರ್ತಿ ತಂದಿರುತ್ತಾರೆ.
* ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 78 ವಿದ್ಯಾರ್ಥಿಗಳಿಗೆ ಪಾಲಿಕೆ ವತಿಯಿಂದ 25,000 ರೂ. ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುವುದು.
ರಾಜ್ಯದಲ್ಲಿಯೇ ಪ್ರಪಥಮ ಬಾರಿಗೆ ಪವರ್ ಮ್ಯಾನ್ ಗಳಿಗೆ ಮಂಡ್ಯದಲ್ಲಿ ಸುರಕ್ಷಿತ ಸಾಮಗ್ರಿ ವಿತರಣೆ