ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕೆಲವು ದಿನಗಳ ನಂತರ ಪಾಕಿಸ್ತಾನ ಕ್ರಿಕೆಟಿಗರಾದ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಇನ್ಸ್ಟಾಗ್ರಾಮ್ ಖಾತೆಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ.
ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಗುಂಡಿಕ್ಕಿ ಕೊಂದರು ಮತ್ತು ಅದರ ನಂತರ, ಭಾರತ ಸರ್ಕಾರವು ಪಾಕಿಸ್ತಾನದ ವಿರುದ್ಧ ಹಲವಾರು ಕ್ರಮಗಳನ್ನು ಘೋಷಿಸಿತು.
ಈ ಹಿಂದೆ, ಹಲವಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ಗಳನ್ನು ಭಾರತ ಸರ್ಕಾರ ನಿಷೇಧಿಸಿತ್ತು. ಇದರಲ್ಲಿ ಜನಪ್ರಿಯ ಕ್ರಿಕೆಟಿಗರಾದ ಶೋಯೆಬ್ ಅಖ್ತರ್ ಮತ್ತು ಬಾಸಿತ್ ಅಲಿ ಅವರ ಚಾನೆಲ್ಗಳು ಸೇರಿವೆ.
ಇದೀಗ ಪಾಕಿಸ್ತಾನ ಕ್ರಿಕೆಟಿಗರಾದಂತ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಇನ್ಸ್ಟಾಗ್ರಾಮ್ ಖಾತೆಗಳನ್ನು ಭಾರತದಲ್ಲಿ ಇನ್ನು ಮುಂದೆ ಪ್ರವೇಶಿಸಲಾಗುವುದಿಲ್ಲ. ಪಾಕಿಸ್ತಾನದ ಒಲಿಂಪಿಕ್ ಚಿನ್ನದ ಪದಕ ವಿಜೇತ ಅಥ್ಲೀಟ್ ಅರ್ಷದ್ ನದೀಮ್ ಅವರ ಇನ್ಸ್ಟಾಗ್ರಾಮ್ ಖಾತೆಯನ್ನು ಭಾರತದಲ್ಲಿ ನಿಷೇಧಿಸಲಾಗಿದೆ.
Babar Azam and Mohammad Rizwan banned in India 🚬🔥 pic.twitter.com/mrI3j3mtyI
— कट्टर KKR समर्थक 🦁🇮🇳 ™ (@KKRWeRule) May 2, 2025
ಬಿಜೆಪಿಯಿಂದ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಲಾಗುವುದು: ಬಿವೈ ವಿಜಯೇಂದ್ರ
ರಾಜ್ಯದಲ್ಲಿಯೇ ಪ್ರಪಥಮ ಬಾರಿಗೆ ಪವರ್ ಮ್ಯಾನ್ ಗಳಿಗೆ ಮಂಡ್ಯದಲ್ಲಿ ಸುರಕ್ಷಿತ ಸಾಮಗ್ರಿ ವಿತರಣೆ