ಬೆಂಗಳೂರು: ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳ ನಿಯೋಗ ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಚರ್ಚಿಸಿದರು. ಅಲ್ಲದೇ ಸಿಎಂ ಸಿದ್ಧರಾಮಯ್ಯ ಅವರಿಗೆ ಈ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು.
ಸ್ವಾಮೀಜಿಗಳ ನಿಯೋಗದಿಂದ ಸಿಎಂ ಸಿದ್ಧರಾಮಯ್ಯಗೆ ಈ ಬೇಡಿಕೆ
*ಎಲ್ಲಾ ದಲಿತ ಮತ್ತು ಹಿಂದುಳಿದ ಮಠಗಳಿಗೆ ಅನುದಾನ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
*ಹಿಂದುಳಿದ ಮತ್ತು ದಲಿತ ಅರ್ಚಕರನ್ನು ರೂಪಿಸಲು ಅನುಕೂಲ ಆಗುವ ರೀತಿ ಗುರುಕುಲ ಆರಂಭಿಸಲು ಚಿತ್ರದುರ್ಗ ಜಿಲ್ಲೆಯಲ್ಲಿ ಜಾಗ ನೀಡುವಂತೆ ನಿಯೋಗ ಮನವಿ ಮಾಡಿತು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಗ ಗುರುತಿಸಿ ವರದಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
*ಎಲ್ಲಾ ಹಿಂದುಳಿದ ಮತ್ತು ದಲಿತ ಮಠಗಳಿಗೆ ಬೆಂಗಳೂರಿನಲ್ಲಿ ನಿವೇಶನ ಒದಗಿಸುವಂತೆ ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಪರಿಶೀಲನೆ ಮಾಡುವ ಭರವಸೆ ನೀಡಿದರು.
BIG NEWS: ಮೇ.5ರಿಂದ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಸಮಗ್ರ ಸಮೀಕ್ಷೆ ಆರಂಭ
ಭೂಕಬಳಿಕೆದಾರರಿಂದ ಶೀಬಿ ಅರಣ್ಯಭೂಮಿ ರಕ್ಷಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ