ಬೆಂಗಳೂರು: ನಕ್ಸಲ್ ನಿಗ್ರಹ ಪಡೆ ಮಾದರಿಯಲ್ಲೇ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚನೆ ಮಾಡಲಾಗುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ ನಿಯಂತ್ರಿಸಲು ನಕ್ಸಲ್ ನಿಗ್ರಹ ಪಡೆ ಮಾದರಿಯಲ್ಲಿ ʼಕೋಮು ಹಿಂಸೆ ನಿಗ್ರಹ ಕಾರ್ಯಪಡೆʼಯನ್ನು ರಚಿಸಲಿದ್ದೇವೆ. ಇದು ಪೊಲೀಸರ ಸಹಯೋಗದಲ್ಲಿ ಕೆಲಸ ಮಾಡಲಿದೆ. ಯಾರು ಕೋಮು ಚಟುವಟಿಕೆಯನ್ನು ನಡೆಸುತ್ತಾರೆ, ಯಾರು ಅದನ್ನು ಬೆಂಬಲಿಸುತ್ತಾರೆ, ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವ ಅಧಿಕಾರವನ್ನು ಈ ಕಾರ್ಯಪಡೆಗೆ ಒದಗಿಸುತ್ತೇವೆ ಎಂದು ತಿಳಿಸಿದ್ದಾರೆ.
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ ನಿಯಂತ್ರಿಸಲು ನಕ್ಸಲ್ ನಿಗ್ರಹ ಪಡೆ ಮಾದರಿಯಲ್ಲಿ ʼಕೋಮು ಹಿಂಸೆ ನಿಗ್ರಹ ಕಾರ್ಯಪಡೆʼಯನ್ನು ರಚಿಸಲಿದ್ದೇವೆ. ಇದು ಪೊಲೀಸರ ಸಹಯೋಗದಲ್ಲಿ ಕೆಲಸ ಮಾಡಲಿದೆ. ಯಾರು ಕೋಮು ಚಟುವಟಿಕೆಯನ್ನು ನಡೆಸುತ್ತಾರೆ, ಯಾರು ಅದನ್ನು ಬೆಂಬಲಿಸುತ್ತಾರೆ, ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ… pic.twitter.com/OtfVyG8LyF
— DIPR Karnataka (@KarnatakaVarthe) May 3, 2025
ಮಂಗಳೂರು ಶಾಂತಿಗೆ ಬರುತ್ತಿತ್ತು. ಕಳೆದ ನಾಲ್ಕೈದು ದಿನದಿಂದ ಆದ ಘಟನೆ ಮತ್ತು ನಿನ್ನೆ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ನಾವು ಇದನ್ನು ಹೀಗೆ ಮುಂದುವರಿಯಲು ಯಾವುದೇ ಕಾರಣಕ್ಕು ಬಿಡುವುದಿಲ್ಲ. ಆರೋಪಿಗಳ ಪತ್ತೆಗಾಗಿ ಈಗಾಗಲೇ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದ್ದು, ಶೋಧ ನಡೆಸಿದ್ದಾರೆ. ಇನ್ನು ಮುಂದೆಯೂ ಇಂತಹ ಘಟನೆ ಆಗಲು ಬಿಡುವುದಿಲ್ಲ ಎಂದು ಹೇಳಿದರು.
ಶಾಂತಿಯನ್ನು ಕಾಪಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಮನವಿ ಮಾಡುತ್ತೇನೆ. ಸರ್ಕಾರ ಮತ್ತು ಪೊಲೀಸ್ ಇಲಾಖೆ ನಿಮ್ಮ ಜೊತೆಯಲ್ಲಿದೆ. ಶಾಂತಿ ಕಾಪಾಡಲು ಎಲ್ಲ ರೀತಿಯ ಪ್ರಯತ್ನವನ್ನು ನಾವು ಮಾಡುತ್ತೇವೆ. ಈಗಾಗಲೇ ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ಜರುಗಬಾರದು ಎಂಬ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ.
ನಿನ್ನೆಯ ಘಟನೆಯ ಕುರಿತು ಸಂಪೂರ್ಣ ವರದಿ ಕೇಳಿದ್ದೇನೆ. ತನಿಖೆ ಆರಂಭಿಸಲಾಗಿದ್ದು ಆರೋಪಿಗಳನ್ನು ಬಿಡುವುದಿಲ್ಲ. ಇದನ್ನು ಹತ್ತಿಕ್ಕಲು ಎಲ್ಲ ರೀತಿಯ ಪ್ರಯತ್ನ, ಕ್ರಮ ಕೈಗೊಂಡಿದ್ದು, ಬೆಳೆಯಲು ಬಿಡುವುದಿಲ್ಲ. ಯಾವುದೇ ಪಕ್ಷ, ಸಂಘಟನೆಯವರು ಅಥವಾ ಬೇರೆ ಯಾರೇ ಆಗಿದ್ದರೂ ಬಿಡುವುದಿಲ್ಲ ಎಂದು ಎಚ್ಚರಿಸಿದರು.
ಬಿಜೆಪಿ ಮುಖಂಡರ ಆರೋಪಗಳ ಕುರಿತು ಪ್ರತಿಕ್ರಿಯಿಸಿ, ಯಾರು ಕೂಡ ಕೊಲೆ ಆಗಬೇಕು ಎಂದು ಬಯಸುವುದಿಲ್ಲ. ಜವಾಬ್ಧಾರಿಯುತ ಸರ್ಕಾರವಾಗಿ ಶಾಂತಿ ಸುವ್ಯವಸ್ಥೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಜವಾಬ್ಧಾರಿ. ಈ ಜವಾಬ್ಧಾರಿಯಿಂದ ನಾವು ನುಣುಚಿಕೊಳ್ಳುವುದಿಲ್ಲ. ಈಗಾಗಲೇ ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇಂತಹ ಘಟನೆಗಳಾದಾಗ ಕಾನೂನು ಪ್ರಕಾರ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಅದೆಲ್ಲವನ್ನು ಮಾಡಿದ್ದೇವೆ. ಇದನ್ನು ಬಿಡುವುದಿಲ್ಲ ಎಂದು ಹೇಳಿದರು
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಹಿಂದು ಕಾರ್ಯಕರ್ತರಿಗೆ ಜೀವಭಯವಿದೆ, ಉಳಿಗಾಲವಿಲ್ಲ ಎಂದಿರುವ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್‌ನಲ್ಲಿ ಬೇರೆಯವರಿದ್ದಾರ? ಹಿಂದುಗಳಿಲ್ಲವೇ? ನಾವೆಲ್ಲ ಹಿಂದುಗಳಲ್ಲವ? ನಾವು ಬೇರೆಯವರ? ಆ ರೀತಿ ವಿಶ್ಲೇಷಣೆ ಮಾಡುವುದು ಸರಿಯಲ್ಲ. ಕೊಲೆಯಾಗಿದೆ ಆರೋಪಿಗಳನ್ನು ಹಿಡಿದು ಹಾಕುತ್ತೇವೆ. ಘಟನೆಗೆ ಬೇರೆಬೇರೆ ಬಣ್ಣಕಟ್ಟುವುದು ಬೇಡ. ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.
ಭೂಕಬಳಿಕೆದಾರರಿಂದ ಶೀಬಿ ಅರಣ್ಯಭೂಮಿ ರಕ್ಷಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ
ದ್ವಿತೀಯ ಪಿಯುಸಿ ಪಾಸ್ ಆಗಿದ್ದೀರಾ.? ಈ ಫ್ಯಾಶನ್ ಡಿಸೈನ್ ಪದವಿ ಕೋರ್ಸ್ ಗೆ ಅರ್ಜಿ ಸಲ್ಲಿಸಿ