ಕಟಕ್ : ಒಡಿಶಾದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಒಡಿಶಾದ ಕಟಕ್ ನ ಖಾನ್ ನಗರ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಸ್ಲ್ಯಾಬ್ ಕುಸಿದು ಕನಿಷ್ಠ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಖಾನ್ನಗರದಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿದ್ದಾಗ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಐದು ಜನರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಎಸ್ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಲ್ಲಿ ಮೂವರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.