ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಮನೆಯ ಮೂರನೇ ಮಹಡಿಯಿಂದ ಬಿದ್ದು ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ರಾಜೀವ್ ಗಾಂಧಿ ನಗರ ಚರ್ಚ್ ರೋಡ್ ನಲ್ಲಿ ಮನೆಯ ಮೂರನೇ ಮಹಡಿಯಿಂದ ಬಿದ್ದು ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವೃದ್ಧೆಯನ್ನು ವಿಜಯಲಕ್ಷ್ಮೀ (60) ಎಂದು ಗುರುತಿಸಲಾಗಿದೆ.
ಕೋವಿಡ್ ಸಮಯದಲ್ಲಿ ಓರ್ವ ಪುತ್ರನನ್ನು ಕಳೆದುಕೊಂಡಿದ್ದ ವೃದ್ಧೆ. ಸೊಸೆ ಹಾಗೂ ಮೊಮ್ಮಕ್ಕಳ ಜೊತೆಗೆ ವಾಸವಾಗಿದ್ದು, ಬೆಳಗಿನ ಜಾವ 4 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.