ಚಿಕ್ಕಬಳ್ಳಾಪುರ : ಜಮೀನು ವಿವಾದ ಹಿನ್ನೆಲೆಯಲ್ಲಿ ಮನೆಗೆ ನುಗ್ಗಿ ಎಲೆಕ್ಟ್ರಿಕಲ್ ಕಾಂಟ್ರಾಕ್ಟರ್ ರನ್ನು ಮಚ್ಚಿನಿಂದ ಹಲ್ಲೆ ಮಾಡಿ ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೋಶೆಟ್ಟಿಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ.
ಮಚ್ಚಿನಿಂದ ಕೊಚ್ಚಿ ವೃದ್ಧನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೋಶೆಟ್ಟಿಹಳ್ಳಿ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಎಲೆಕ್ಟ್ರಿಕಲ್ ಕಾಂಟ್ರಾಕ್ಟರ್ ಲಕ್ಷ್ಮಿನರಸಪ್ಪ (65) ಎನ್ನುವವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮನೆಗೆ ನುಗ್ಗಿ ಸಂಬಂಧಿಕ ನಂದೀಶ ಎಂಬುವವನಿಂದ ಲಕ್ಷ್ಮಿನರಸಪ್ಪನ ಕೊಲೆಯಾಗಿದೆ.
ಘಟನೆಗೆ ಸಂಬಂಧಸಿದಂತೆ ಹಂತಕರು ನಂದೀಶನನ್ನು ಚಿಕ್ಕಬಳ್ಳಾಪುರ ಗ್ರಾಮದ ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹತ್ಯೆಯ ಕುರಿತಂತೆ ಚಿಕ್ಕಬಳ್ಳಾಪುರ ಗ್ರಾಮದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ