ಹಾಸನ : ಚಲಿಸುತ್ತಿದ ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೆಂಚನಹಳ್ಳಿ ಬಳಿ ನಡೆದಿದೆ. ಮೃತ ಪೊಲೀಸ್ ಕಾನ್ಸ್‌ಟೇಬಲ್ ನನ್ನು ಪ್ರಕಾಶ್ (38) ಎಂದು ತಿಳಿದುಬಂದಿದೆ.
11ನೇ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಪೊಲೀಸ್ ಕಾನ್ಸ್‌ಟೇಬಲ್ ಪ್ರಕಾಶ್ ಅವರು ಹಾಸನ ನಗರದಿಂದ ಸರ್ಕಾರಿ ದ್ವಿಚಕ್ರ ವಾಹನದಲ್ಲಿ ಗಾಡೇನಹಳ್ಳಿಗೆ ಕರ್ತವ್ಯಕ್ಕೆ ತೆರಳುತ್ತಿದ್ದರು. ಈ ವೇಳೆ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.