ದಕ್ಷಿಣಕನ್ನಡ : ಅವಹೇಳನಕಾರಿ ಹೇಳಿಕೆ ಹಾಗೂ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಜಾ ವಿರುದ್ಧ ಇದೀಗ FIR ದಾಖಲಾಗಿದೆ.
ಹೌದು ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲಾಗಿದೆ. ತೆಕ್ಕಾರಿ ಗ್ರಾಮದ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಅವಹೇಳನಕಾರಿ ಹಾಗೂ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ತೆಕ್ಕಾರು ನಿವಾಸಿ ಎಸ್ ಬಿ ಇಬ್ರಾಹಿಂ ಅವರು ದೂರು ನೀಡಿದ್ದರು. ಇದೀಗ ಅವರ ದೂರಿನ ಅನ್ವಯ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.