ಕಲಬುರ್ಗಿ : ಕಳೆದ ಏಪ್ರಿಲ್ 16 ರಂದು ಸಿಇಟಿ ಪರೀಕ್ಷೆಯ ವೇಳೆ ರಾಜ್ಯದ ಬೀದರ್, ಶಿವಮೊಗ್ಗ ಹಾಗೂ ಧಾರವಾಡದಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಪ್ರಕರಣ ಇಡೀ ರಾಜ್ಯಾದ್ಯಂತ ಭಾರಿ ಸದ್ದು ಮಾಡಿತ್ತು. ಇದೀಗ ನೀಟ್ ಪರೀಕ್ಷೆಯಲ್ಲೂ ಕೂಡ ಅಧಿಕಾರಿಗಳು ಜನಿವಾರ ತೆಗೆಸಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.
ಹೌದು ಕಲ್ಬುರ್ಗಿಯ ಸೇಂಟ್ ಮೇರಿ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ನೀಟ್ ಪರೀಕ್ಷೆಯಲ್ಲೂ ಅಧಿಕಾರಿಗಳು ವಿದ್ಯಾರ್ಥಿಯ ಬಳಿಯಿಂದ ಜನಿವಾರ ತೆಗೆಸಿದ್ದಾರೆ. ವಿದ್ಯಾರ್ಥಿಯಾದ ಶ್ರೀಪಾದ್ ಪಾಟೀಲ್ ಎನ್ನುವ ನಿಂದ ಅಧಿಕಾರಿಗಳು ಜನಿವಾರ ತೆಗೆಸಿದ್ದಾರೆ ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಜನಿವಾರ ತೆಗೆಯುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಸಿಇಟಿ ಪರೀಕ್ಷೆಯಲ್ಲೂ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಘಟನೆ ನಡೆದಿತ್ತು. ಬಳಿಕ ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅದಾದ ಬಳಿಕ ಜನಿವಾರ ತೆಗೆಸಿದ ಅಧಿಕಾರಿಗಳು ಸಿಬ್ಬಂದಿಗಳು ಸಸ್ಪೆಂಡ್ ಕೂಡ ಆಗಿದ್ದರು. ಇದೀಗ ಕಲ್ಬುರ್ಗಿಯಲ್ಲಿ ಜನಿವಾರ ತೆಗೆಸಿದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಅಧಿಕಾರಿಗಳ ಈ ಒಂದು ನಡೆಗೆ ಇದೀಗ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.