ರಾಮನಗರ : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಮ್ಮಳ್ಳಿದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಮರಕ್ಕೆ ಕಾರುಡಿಕೆಯಾಗಿ ಮಧು ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಮಧು, ದೀಪು ಮತ್ತು ಅಭಿ ಎಂಬುವವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಮೃತರು ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಿಗಳು ಎಂದು ತಿಳಿದು ಬಂದಿದೆ. ಇನ್ನು ಅಪಘಾತದಲ್ಲಿ ಚಿರು ಎಂಬಾತನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಬ್ಬಾಳು ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್ ಆಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಕಾರು ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆM KA 03 NA 4031 ಸಂಖ್ಯೆಯ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೋಂಡಿದೆ ಅಕ್ಕುರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ.