ಶ್ರೀನಗರ : ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸುತ್ತಿದ್ದು, ತಡರಾತ್ರಿ ಜಮ್ಮು-ಕಾಶ್ಮೀರದ ಹಲವಡೆ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆಯ ತಕ್ಕ ಪ್ರತ್ಯುತ್ತರ ನೀಡಿದೆ.
ಈ ಕುರಿತು ಭಾರತೀಯ ಸೆನೆ ಮಾಹಿತಿ ಹಂಚಿಕೊಂಡಿದ್ದು, 2025 ರ ಮೇ 04 -05 ರ ರಾತ್ರಿ, ಪಾಕಿಸ್ತಾನ ಸೇನಾ ಠಾಣೆಗಳು ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಪೂಂಚ್, ರಾಜೌರಿ, ಮೆಂಧರ್, ನೌಶೇರಾ, ಸುಂದರ್‌ಬಾನಿ ಮತ್ತು ಅಖ್ನೂರ್ ಎದುರು ಪ್ರದೇಶಗಳಲ್ಲಿ ಎಲ್‌ಒಸಿಯಾದ್ಯಂತ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿ ನಡೆಸಿದವು. ಭಾರತೀಯ ಸೇನೆಯು ತಕ್ಷಣ ಮತ್ತು ಪ್ರಮಾಣಾನುಗುಣವಾಗಿ ಪ್ರತಿಕ್ರಿಯಿಸಿತು ಎಂದು ತಿಳಿಸಿದೆ.
During the night of 04 -05 May 2025, Pakistan Army posts resorted to unprovoked small arms fire across the LoC in areas opposite Kupwara, Baramulla, Poonch, Rajauri, Mendhar, Naushera, Sunderbani, and Akhnoor in J&K. The Indian Army responded promptly and proportionately: Indian…
— ANI (@ANI) May 5, 2025