ಮಂಗಳೂರು : ವಿಹೆಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಗೆ ಜೀವ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕದ್ರಿ ಪೊಲೀಸ್ ಠಾಣೆಗೆ ಶರಣ್ ಪಂಪ್ ವೇಲ್ ದೂರು ನೀಡಿದ್ದಾರೆ.
ಶರಣ್ ಪಂಪ್ ವೆಲ್ ಗೆ ಜೀವ ಬೆದರಿಕೆ ಹಿನ್ನೆಲೆಯಲ್ಲಿ ಮಂಗಳೂರಿನ ಕದ್ರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆ, BNS ಕಾಯ್ದೆ 351(4) ಸೆಕ್ಷನ್ ಅಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಕಿಡಗೇಡಿಗಳು ವಿಹೆಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಗೆ ಜೀವ ಬೆದರಿಕೆ ಹಾಕಿದ್ದು, ಮುಂದಿನ ಟಾರ್ಗೆಟ್ ಶರಣ್ ಪಂಪ್ ವೆಲ್ ಎಂದು ಪೋಸ್ಟ್ ಮಾಡಿದ್ದರು.