ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಒಳ ಮೀಸಲಾತಿ ಕುರಿತಾದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.
ಪರಿಶಿಷ್ಟ ಜಾತಿ ಒಳ ಮೀಸಲು ಕಲ್ಪಿಸುವ ಕುರಿತು ಶಿಫಾರಸು ಮಾಡಲು ಸರ್ಕಾರ ರಚಿಸಿರುವ ನ್ಯಾ| ನಾಗಮೋಹನ್ ದಾಸ್ ಆಯೋಗ ಇಂದಿನಿಂದ ಸಮೀಕ್ಷೆಗೆ ಚಾಲನೆ ನೀಡಲಿದ್ದು, ಗಣತಿದಾರರು ಪ್ರತಿ ಮನೆ ಮನೆಗೂ ಆಗಮಿಸಿ ಸಮೀಕ್ಷೆ ನಡೆಸಲಿದ್ದಾರೆ.
ಗಣತಿದಾರರು ಕೇವಲ ಪರಿಶಿಷ್ಟ ಜಾತಿಗೆ ಸೇರಿದವರ ಮನೆಗೆ ಮಾತ್ರವಲ್ಲದೆ ಎಲ್ಲ ಮನೆಗಳಿಗೂ ಭೇಟಿ ನೀಡಲಿದ್ದಾರೆ. ಈ ವೇಳೆ ಎಸ್ಸಿ ಅಲ್ಲದ ಕುಟುಂಬಗಳಿಂದ ಮನೆ ಸಂಖ್ಯೆ ಆ್ಯಪ್ ನಲ್ಲಿ ನಮೂದಿಸಿ ಕುಟುಂಬ ಸದಸ್ಯರ ಸಂಖ್ಯೆ ದಾಖಲಿಸಲಿದ್ದಾರೆ.