ಬೆಂಗಳೂರು: ಕನ್ನಡಿಗರ ಬಗ್ಗೆ ವಿವಾವದತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ವಿರುದ್ದ ದೂರು ದಾಖಲಾಗಿದ್ದು, ಇಂದು ಪೊಲೀಸರು ಸೋನು ನಿಗಮ್ ಗೆ ನೋಟಿಸ್ ಜಾರಿ ಮಾಡಿದ್ದಾರೆ.
ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕನ್ನಡ ಪರ ಹೋರಾಟಗಾರರು ದೂರು ದಾಖಲಿಸಿದ್ದು, ದೂರಿನಲ್ಲಿ ಸೋನು ನಿಗಮ್ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು, ಇದೀಗ ಸೋನು ನಿಗಮ್ ಗೆ ಬೆಂಗಳೂರು ಪೊಲೀಸರು ನೋಟಿಸ್ ನೀಡಿದ್ದಾರೆ. ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಖ್ಯಾತ ಗಾಯಕ ಸೋನು ನಿಗಮ್ ಗೆ ನೋಟಿಸ್ ನೀಡಿದ್ದಾರೆ. ಪೊಲೀಸರು ಇಮೇಲ್, ರಿಜಿಸ್ಟರ್ ಪೋಸ್ಟ್ ಮೂಲಕ ನೋಟಿಸ್ ನೀಡಿ ಪ್ರಕರಣದ ಬಗ್ಗೆ ವಿವರಣೆ ನೀಡುವಂತೆ ಸೂಚಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 352 (1), 351 (2) ಮತ್ತು 353 ರ ಅಡಿಯಲ್ಲಿ ದ್ವೇಷ, ಕ್ರಿಮಿನಲ್ ಮಾನಹಾನಿ ಮತ್ತು ಭಾಷಾ ಭಾವನೆಗಳನ್ನು ಕೆರಳಿಸಿದ್ದಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸೋನು ನಿಗಮ್ ಅವರ ಹೇಳಿಕೆಗಳು ಕನ್ನಡಿಗ ಸಮುದಾಯಕ್ಕೆ ತೀವ್ರ ನೋವನ್ನುಂಟು ಮಾಡಿವೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.