ಬೆಂಗಳೂರು : ನಿನ್ನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಎಂದು ದಾಖಲಾಗಿದ್ದ ವಿಚಾರಣಾಧೀನ ಕೈದಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ತುಮಕೂರಿನ ಬಸ್ ನಿಲ್ದಾಣದಲ್ಲಿ ಪೊಲೀಸರು ವಿಚಾರಣಾಧಿನ ಕೈದಿಯನ್ನು ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ.
ಹೌದು ನಿನ್ನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ನಲ್ಲಿ ವಿಚಾರಣಾಧೀನ ಕೈದಿ ಚಂದ್ರಶೇಖರ್ ಚಿಕಿತ್ಸೆಗೆ ಎಂದು ದಾಖಲಾಗಿದ್ದ ಈ ವೇಳೆ ಪೊಲೀಸರ ಕಣ್ತಪ್ಪಿಸಿ ಕೈದಿ ಚಂದ್ರಶೇಖರ್ ಆಸ್ಪತ್ರೆಯಿಂದ ಪರಾರಿಯಾಗಿದ್ದ.ಇದೀಗ ಆಸ್ಪತ್ರೆಯಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಚಂದ್ರಶೇಖರ್ ನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ತುಮಕೂರಿನ ಚಂದ್ರಶೇಖರ್ ನನ್ನು ಪೋಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ ನಿನ್ನೆ ರಾತ್ರಿ 8:30 ಸುಮಾರಿಗೆ ವಿಚಾರಣಾಧಿಕಾರಿ ಬಸ್ ನಿಲ್ದಾಣದಲ್ಲಿ ಸಿಕ್ಕಿದ್ದಾನೆ. ಚಂದ್ರಶೇಖರನನ್ನು ತುಮಕೂರಿನಿಂದ ಬೆಂಗಳೂರಿಗೆ ಪೊಲೀಸರು ಕರೆ ತಂದಿದ್ದು ವಿವಿ ಪುರಂ ಠಾಣೆಯಲ್ಲಿ ಕೈದಿಯನ್ನು ಇರಿಸಲಾಗಿದೆ.