ಬೆಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೌದು ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು ಆಗಿರುವುದರಿಂದ ತಕ್ಷಣ ಅವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ನಟ ಉಪೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಅವರು ಸ್ಪರ್ಶ ಆಸ್ಪತ್ರೆಗೆ ದಾಖಲಾಗಿದ್ದು ಓವರ್ ಆಸಿಡಿಟಿಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ. ಅದು ಬಿಟ್ರೆ ಇನ್ನು ಯಾವುದೇ ಗಂಭೀರವಾದ ಸಮಸ್ಯೆ ಇಲ್ಲ ಎಂದು ಹೇಳಲಾಗುತ್ತಿದೆ.