ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಕಾರು ಅಪಘಾತವಾಗಿದ್ದು ಮಾಜಿ ಶಾಸಕ ಆರ್ ವಿ ಪಾಟೀಲ್ ಪುತ್ರ ಹಾಗೂ ಇನ್ನೊಂದು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಒಂದು ಅಪಘಾತದಲ್ಲಿ ಪತಿ ಪತ್ನಿ ಹಾಗೂ ಓರ್ವ ಮಗು ಸಾವನ್ನಪ್ಪಿದ್ದರೆ ಇನ್ನೂ ಮಾಜಿ ಶಾಸಕ ಆರ್ ವಿ ಪಾಟೀಲ್ ಪುತ್ರನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ.
ಈ ಒಂದು ಅಪಘಾತ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೊರ ವಲಯದ ಬೈಲಹೊಂಗಲ-ಬೆಳಗಾವಿಗೆ ಸಂಪರ್ಕಿಸುವ ಹೆದ್ದಾರಿಯಲ್ಲಿ ಸಂಭವಿಸಿದೆ.ಬೆಳಗಾವಿಯಿಂದ ಬೈಲಹೊಂಗಲ ಹೋಗುತ್ತಿದ್ದ ಕೀಯಾ ಕಾರು ಓವರ್ ಟೆಕ್ ಮಾಡಲು ಹೋಗಿ ಎದುರಗಡೆ ಬರುತ್ತಿದ್ದ ಅಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ಅಲ್ಟೋ ಕಾರಿನಲ್ಲಿದ್ದ ಗಂಡ ಅಯುಮ್, ಹೆಂಡತಿ, ಒಂದು ಮಗು ಸ್ಥಳದಲ್ಲೇ ಮೃತಪಟ್ಟಿದೆ.
ಮತ್ತೊಂದು ಮಗುವಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಕೀಯಾ ಕಾರಿನಲ್ಲಿದ್ದ ಮಾಜಿ ಶಾಸಕ ಆರ್.ವಿ ಪಾಟೀಲ್ ಪುತ್ರ ಸೇರಿದಂತೆ ಮತ್ತೊಬ್ಬರು ಗಾಯಗೊಂಡಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಶವಗಳು ಸ್ಥಳೀಯ ಆಸ್ಪತ್ರೆಗೆ ಪೊಲೀಸರು ರವಾನಿಸಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.