ಯುವನಿಧಿ ಫಲಾನುಭವಿಗಳು ಪ್ರತಿ ತಿಂಗಳು ದಾಖಲಿಸುತ್ತಿರುವ ಸ್ವಯಂ ಘೋಷಣೆಯನ್ನು ಇನ್ನೂ ಮುಂದೆ ಮೂರು ತಿಂಗಳಿಗೊಮ್ಮೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
2023 ಅಥವಾ 2024ನೇ ಸಾಲಿನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮ್ ನಲ್ಲಿ ತೇರ್ಗಡೆಯಾಗಿ, ಇನ್ನೂ ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸದೇ ಇರುವ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟ್ಲ್ ವೆಬ್‌ಸೈಟ್ https://sevasindhugs.karnataka.gov.in ಮೂಲಕ ಗ್ರಾಮ್ ಒನ್ , ಕರ್ನಾಟಕ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೆ ಕೊನೆಯ ದಿನಾಂಕ ನಿಗದಿಯಾಗಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಯುವನಿಧಿ ಸಹಾಯವಾಣಿ ಸಂಖ್ಯೆ : 18005997154ಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಪ್ರಕಟಣೆ ತಿಳಿಸಿದೆ.