ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿ, ಬಾಯಿಗೆ ಬಂದಂತೆ ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಕೇಂದ್ರ ಕಾರಾಗೃಹ ವೀಕ್ಷಣೆಗಾರನನ್ನು ಅಮನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕೇಂದ್ರ ಕಾರಾಗೃಹ ವೀಕ್ಷಣೆಗಾರ ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶಿಸಿದ್ದಾರೆ.
ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಕೈ ಎತ್ತಿದ ಬಗ್ಗೆ ಏ.28 ರಂದು ಎಚ್.ಎನ್.ಮಧು ಕುಮಾರ್ ವಿಡಿಯೊ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.ಆ ವಿಡಿಯೊ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ತಕ್ಷಣ ಅವರನ್ನು ಅಮಾನತುಗೊಳಿಸಲಾಗಿದೆ. ಜತೆಗೆ ಇಲಾಖಾ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ರಮೇಶ್ ತಿಳಿಸಿದರು.
ಅಲ್ಲದೆ ನಿನ್ನೆ ತಾನೆ ಉಡುಪಿಯಲ್ಲಿ ಹೋಂ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈತ ಸಮಾಜಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯನನ್ನು ಕೊಂದರೆ ಮಾತ್ರ ಹಿಂದೂಗಳಿಗೆ ನೆಮ್ಮದಿ ಎಂದು ಪೋಸ್ಟ್ ಒಂದಕ್ಕೆ ಕಮೆಂಟ ಹಾಕಿದ್ದ. ಈ ಒಂದು ಕಮೆಂಟ್ ಆಧರಿಸಿ ಕಾರ್ಕಳ ಪೊಲೀಸರು ಹೋಂ ಗಾರ್ಡ್ ನನ್ನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.