ಬೆಂಗಳೂರು: ನಾಳೆ ಬೆಂಗಳೂರಿನ ಎರಡು ಕಡೆಯಲ್ಲಿ ಮಾಕ್ ಡ್ರಿಲ್ ಮಾಡಲು ಪೊಲೀಸ್ ಇಲಾಖೆ ತೀರ್ಮಾನಿಸಿದೆ.
ಪಹಲ್ಗಾಮ್ ದಾಳಿಯ ನಂತ್ರ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಆವರಿಸಿದೆ. ಈ ಹಿನ್ನಲೆಯಲ್ಲಿ ನಾಳೆ ದೇಶದ 244 ಕಡೆಯಲ್ಲಿ ಅಣಕು ಯುದ್ಧ ಸಮರಾಭ್ಯಾಸ ನಡೆಸಲು ಕೇಂದ್ರ ಸರ್ಕಾರ ಆದೇಶಿಸಿತ್ತು.
ಈ ಹಿನ್ನಲೆಯಲ್ಲಿ ಕರ್ನಾಟಕದ ಮೂರು ಕಡೆಯಲ್ಲಿ ಮಾಕ್ ಡ್ರಿಲ್ ನಡೆಯಲಿದೆ. ಬೆಂಗಳೂರು ಎರಡು ಕಡೆ ಹಾಗೂ ರಾಯಚೂರಲ್ಲಿ ನಾಳೆ ಮಾಕ್ ಡ್ರಿಲ್ ನಡೆಸಲಾಗುತ್ತಿದೆ.
ನಾಳೆ ಬೆಂಗಳೂರಿನ ಎರಡು ಕಡೆಯಲ್ಲಿ ಅಣಕು ಸಮರಾಭ್ಯಾಸ ನಡೆಸಲು ತೀರ್ಮಾನಿಸಲಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಮುಂಡಕೂರು ಫೈರ್ ಅಕಾಡೆಮಿ, ಹಲಸೂರು ಅಗ್ನಿಶಾಮಕ ದಳ ಕೇಂದ್ರ ಕಚೇರಿಯಲ್ಲಿ ಮಾಕ್ ಡ್ರಿಲ್ ನಡೆಯಲಿದೆ.
ನಾಳೆ ಸಂಜೆ 4 ಗಂಟೆಗೆ ಬೆಂಗಳೂರಿನ ಎರಡು ಕಡೆಯಲ್ಲಿ ಮಾಕ್ ಡ್ರಿಲ್ ನಡೆಸಲು ತೀರ್ಮಾನಿಸಲಾಗಿದೆ. ಹೀಗಾಗಿ ನಾಳೆ ಬೆಂಗಳೂರಿನ ಎರಡು ಕಡೆಯಲ್ಲಿ ಯುದ್ಧದ ಸೈರನ್ ಮೊಳಗಲಿದೆ.
“ರೈಲು ಬೋಗಿಯಂತೆ ಮೀಸಲಾತಿ…”: ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ಮಹತ್ವದ ಹೇಳಿಕೆ…!
BIG NEWS: KAS ಮುಖ್ಯ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ: KPSC ಸ್ಪಷ್ಟನೆ