ಮಂಡ್ಯ: ಜಿಲ್ಲೆಯಲ್ಲಿ ಮಗಳನ್ನು ಕೊಂದ ಯುವಕನ ತಂದೆಯನ್ನೇ ಪ್ರತೀಕಾರದ ಸಿಟ್ಟಿನಿಂದ ಆಕೆಯ ತಂದೆಯೇ ಬರ್ಬರವಾಗಿ ಕೊಲೆ ಮಾಡಿರುವಂತ ಬೆಚ್ಚಿ ಬೀಳಿಸುವಂತ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ದೀಪಿಕಾಳನ್ನು 2024 ಜನವರಿ 22 ರಂದು ಅದೇ ಗ್ರಾಮದ ನಿತೀಶ್ ಎಂಬಾತ ಬರ್ಬರವಾಗಿ ಕೊಲೆ ಮಾಡಿದ್ದ. ಇದೀಗ ಮಗಳ ಕೊಲೆಯ ಪ್ರತೀಕಾರಕ್ಕೆ ತಂದೆ ಕೊಲೆ ಆರೋಪಿಯ ತಂದೆಯನ್ನಯ ಕೊಲೆ ಮಾಡಲಾಗಿದೆ.
2024 ಜನವರಿ 22 ರಂದು ಮಾಣಿಕ್ಯನಹಳ್ಳಿ ಗ್ರಾಮದ ದೀಪಿಕಾ ಎಂಬ ಟೀಚರ್ ನಾಪತ್ತೆಯಾಗಿದ್ದಳು. ಬಳಿಕ ಆಕೆ ಜನರಿ 23 ರಂದು ಮೇಲುಕೋಟೆಯ ಬೆಟ್ಟದಲ್ಲಿ ಶವವಾಗಿ ಪತ್ತೆಯಾಗಿದ್ದಳು. ಈ ವೇಳೆ ರಾಜ್ಯದಲ್ಲಿ ದೊಡ್ಡಮಟ್ಟದ ಸುದ್ದಿಯಾಗಿತ್ತು. ಬಳಿಕ ಮಂಡ್ಯ ಪೊಲೀಸರು ಮಾಣಿಕ್ಯನಹಳ್ಳಿ ಗ್ರಾಮದ ನಿತೀಶ್ ಎಂಬ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಈ ಕೊಲೆ ಮಾಡಿದ್ದು ಬೇರೆ ಯಾರು ಅಲ್ಲ ನಿತೀಶ್ ಎಂದು ತಿಳಿದಿತ್ತು.
ಟೀಚರ್ ದೀಪಿಕಾ ಮತ್ತು ನಿತೀಶ್ 2024ರ ಮೊದಲು ಎರಡು ವರ್ಷದಿಂದ ಇಬ್ಬರ ನಡುವೆ ಸ್ನೇಹ, ಸಲುಗೆ ಬೆಳೆದಿತ್ತು. ಇಬ್ಬರ ಸಲುಗೆ ನೋಡಿ ನಿತೀಶ್‌ಗೆ ದೀಪಿಕಾ ಗಂಡ ಹಾಗೂ ಕುಟುಂಬಸ್ಥರು ವಾರ್ನಿಂಗ್ ಕೂಡ ಕೊಟ್ಟಿದ್ದರು. ನಿತೀಶ್ ಜೊತೆಗಿನ ಸಲುಗೆ ಬಗ್ಗೆ ಪ್ರಶ್ನಿಸಿದ್ದಾಗ ಆತ ತಮ್ಮ ಇದ್ದಂತೆ ಎಂದು ದೀಪಿಕಾ ಹೇಳಿಕೊಂಡಿದ್ದಳು. ಕುಟುಂಬಸ್ಥರ ವಾರ್ನಿಂಗ್ ಬಳಿಕ ಇಬ್ಬರು ಅಂತರ ಕಾಯ್ದುಕೊಂಡಿದ್ದರು.
ಇದರಿಂದ ದೀಪಿಕಾಳ ಜೊತೆಗಿನ ಒಡನಾಟವಿಲ್ಲದೇ ನಿತೀಶ್ ಘಾಸಿಗೊಂಡಿದ್ದ. ನಂತರ 2024 ಜನವರಿ 22 ರಂದು ತನ್ನ ಬರ್ತ್ ಡೇ ನೆಪದಲ್ಲಿ ಬೆಟ್ಟದ ತಪ್ಪಲಿಗೆ ದೀಪಿಕಾಳನ್ನು ನಿತೀಶ್ ಕರೆಸಿಕೊಂಡಿದ್ದ. ಆ ವೇಳೆ ಶರ್ಟ್ ಕೂಡ ಗಿಫ್ಟ್ ಕೊಡಲು ದೀಪಿಕಾ ಹೋಗಿದ್ದಳು. ಬಳಿಕ ಇಬ್ಬರ ನಡುವೆ ಜಗಳ ಆರಂಭವಾಗಿತ್ತು. ನಿತೀಶ್‌ನ್ನು ಅವೈಡ್ ಮಾಡುತ್ತಿದ್ದಕ್ಕೆ ದೀಪಿಕಾ ಮೇಲೆ ಸಾಕಷ್ಟು ಆಕ್ರೋಶ ಕೂಡ ಇತ್ತು. ಇದೇ ಕಾರಣಕ್ಕೆ ದೀಪಿಕಾಳನ್ನು ಹತ್ಯೆ ಮಾಡಿದ್ದನು.
ಇದಾದ ಬಳಿಕ ಜೈಲು ಸೇರಿದ್ದ ನಿತೀಶ್ ಜಾಮೀನಿನ ಮೇಲೆ ಹೊರಕ್ಕೆ ಬಂದಿದ್ದ. ತನ್ನ ಮಗಳನ್ನು ಕೊಲೆ ಮಾಡಿದ್ದ ನಿತೀಶ್‌ನನ್ನು ಹೇಗಾದರೂ ಮಾಡಿ ಕೊಲೆ ಮಾಡಬೇಕೆಂದು ದೀಪಿಕಾ ತಂದೆ ವೆಂಕಟೇಶ್ ವಂಚು ಹಾಕುತ್ತಿದ್ದ. ಇದೇ ಭಾನುವಾರ ಧರ್ಮಸ್ಥಳದಲ್ಲಿ ನಿತೀಶ್ ತಂಗಿ ಮದುವೆ ಸಹ ಇತ್ತು. ಇಂದು ನಿತೀಶ್ ತಂದೆ ನರಸಿಂಹೇಗೌಡ ಊರಿನಲ್ಲಿ ಇದ್ದ ವೇಳೆ ದೀಪಿಕಾ ತಂದೆ ವೆಂಕಟೇಶ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಕೊಲೆ ಮಾಡುವ ವೇಳೆ ನನ್ನ ಮಗಳನ್ನು ಕೊಲೆ ಮಾಡಿ ನಿನ್ನ ಮಗಳ ಮದುವೆ ಮಾಡ್ತಾ ಇದ್ದೀರಾ ಎಂದು ಹೇಳಿ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೆಂಕಟೇಶ್‌ಗಾಗಿ ಹುಡುಕಾಟ ನಡೆಸಿದ್ದಾರೆ.
ಒಟ್ಟಾರೆ ಒಂದು ವರ್ಷದ ಬಳಿಕ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ಮಗ ಮನೆಗೆ ಬಂದ, ಜೊತೆಗೆ ಮಗಳ ಮದುವೆ ನಡೆಯುತ್ತಿದೆ ಎಂಬ ಖುಷಿಯಲ್ಲಿ ಇದ್ದ ನರಸಿಂಹೇಗೌಡನನ್ನು ಮಗಳ ಕೊಲೆಯ ಪ್ರತೀಕಾರಕ್ಕಾಗಿ ವೆಂಕಟೇಶ್ ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಮೆಗಾಸ್ಟಾರ್ ಕುಟುಂಬದಲ್ಲಿ ಸಂಭ್ರಮ- ಮೊದಲ ಮಗುವಿನ ನಿರೀಕ್ಷೆಯಲ್ಲಿ ವರುಣ್ ತೇಜ್ ದಂಪತಿ
“ರೈಲು ಬೋಗಿಯಂತೆ ಮೀಸಲಾತಿ…”: ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ಮಹತ್ವದ ಹೇಳಿಕೆ…!