ಹೈದ್ರಾಬಾದ್ : ಆಂಧ್ರಪ್ರದೇಶ ಮತ್ತು ಕರ್ನಾಟಕ ಗಡಿ ಭಾಗದಲ್ಲಿರುವ OMC ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಇದೀಗ ಸಿಬಿಐ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಹೌದು ಈ ಒಂದು ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈದರಾಬಾದ್ ನ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಯಿತು.ಈ ವೇಳೆ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಜನಾರ್ಧನ ರೆಡ್ಡಿ ಅವರಿಗೆ 7 ವರ್ಷಗಳ ಕಾಲ ಜೈಲು ಶಿಕ್ಷೆ ಪ್ರಕಟಿಸಿದೆ.
ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ (OMC) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇದೀಗ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ತೀರ್ಪು ನೀಡಿದೆ. ಇದರ ಬೆನ್ನಲ್ಲೇ ಕೋರ್ಟ್ ಶಿಕ್ಷೆ ಪ್ರಕಟಿಸಿದ್ದು ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ. ಬಂಧನ ಜನಾರ್ದನ ರೆಡ್ಡಿ ನಾನು ಈಗ ಸಾಮಾಜಿಕ ಕಾಯಕಗಳಲ್ಲಿ ತೊಡಗಿದ್ದೇನೆ ನಾನು ಶಾಸಕನಾಗಿದ್ದೇನೆ ದಯವಿಟ್ಟು ಶಿಕ್ಷೆ ಪ್ರಮಾಣ ಕಡಿಮೆಗೊಳಿಸಿ ಎಂದು ಅಂಗಲಾಚಿ ಬೇಡಿಕೊಂಡ ಪ್ರಸಂಗ ಜರುಗಿತು.
ಓಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಈ ಕುರಿತು ತೀರ್ಪು ಪ್ರಕಟಿಸಿದೆ. ಪ್ರಕರಣ ಸಂಬಂಧ ಹಿಂದೂ ದೆಹಲಿಯ ಸೀಬೆ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ಸಿಬಿಐ ನ್ಯಾಯಾಲಯವು ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ಧನರೆಡ್ಡಿ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ.
ಯಡಿಯೂರಪ್ಪ ಆಡಳಿತದಲ್ಲಿ ಈ ಒಂದು ಅಕ್ರಮ ಗಣಿಗಾರಿಕೆ ನಡೆದಿತ್ತು. ಆಂಧ್ರಪ್ರದೇಶ ಮತ್ತು ಕರ್ನಾಟಕದ ಗಡಿ ಭಾಗದ ಓಬಳಾಪುರಂ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಪ್ರಕರಣ ಇದಾಗಿದ್ದು, ಶ್ರೀನಿವಾಸ ರೆಡ್ಡಿ, ಒಎಂಸಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ಶಾಸಕ ಜನಾರ್ದನ ರೆಡ್ಡಿ ಈ ಕಂಪನಿಯ ಮುಖ್ಯಸ್ಥರಾಗಿದ್ದರು.
ಈ ಕಂಪನಿಗೆ ಗಣಿಗಾರಿಕೆ ಮಂಜೂರಾತಿ ನೀಡುವಲ್ಲಿ ಅಕ್ರಮ ಎಸಗಲಾಗಿದೆ. ಅರಣ್ಯ ಇಲಾಖೆ ಮತ್ತು ಗಣಿ ಇಲಾಖೆಯಿಂದಲೂ ಅಕ್ರಮ ನಡೆದಿತ್ತು. ಇದೀಗ ದೆಹಲಿಯ ಸಿಬಿಐ ವಿಶೇಷ ಕೋರ್ಟ್ ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷಗಳ ಕಾಲ ಜೈಲು ಶಿಕ್ಷೆ ಪ್ರಕಟಿಸಿದೆ ಇದರ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಜನಾರ್ದನ ರೆಡ್ಡಿ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಇದೀಗ ಶಾಸಕ ಜನಾರ್ದನ ರೆಡ್ಡಿಯನ್ನು ಪೊಲೀಸರು ಜೈಲಿಗೆ ಕರೆದುಕೊಂಡು ಹೋಗಿದ್ದಾರೆ. ಜನಾರ್ಧನ ರೆಡ್ಡಿ ಸೇರಿದಂತೆ ಮೂವರು ಅಪರಾಧಿಗಳು ಜೈಲಿಗೆ ಶಿಫ್ಟ್ ಆಗಿದ್ದಾರೆ, ನಾಂಪಲ್ಲಿ ಕೋರ್ಟ್ ನಿಂದ ಚಂಚಲಗುಡ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಿದ್ದಾರೆ. ಭದ್ರತೆಯ ನಡುವೆ ಜನಾರ್ಧನ ರೆಡ್ಡಿಯನ್ನು ಪೊಲೀಸರು ಜೈಲಿಗೆ ಸ್ಥಳಾಂತರಿಸಿದ್ದಾರೆ.