ಬೆಂಗಳೂರು: ಕಾಂತಾರಾ-1ರ ಚಿತ್ರೀಕರಣ ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ನಡೆಯುತ್ತಿದೆ. ಈ ಸಿನಿಮಾ ಚಿತ್ರೀಕರಣದ ವೇಳೆಯಲ್ಲಿ ಜೂನಿಯರ್ ಆರ್ಟಿಸ್ಟ್ ಒಬ್ಬರು ನದಿಯಲ್ಲಿ ಈಜಲು ಹೋಗಿ ನೀರಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವಂತ ಕಾಂತಾರಾ-1ಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಇದೀಗ ನೀರಲ್ಲಿ ಮುಳುಗಿ ಕೇರಳದ ಜೂನಿಯರ್ ಆರ್ಟಿಸ್ ಕಪಿಲ್ ಎಂಬುವರು ಸಾವನ್ನಪ್ಪಿದ್ದಾರೆ. ಕೊಲ್ಲೂರು ಸೌಪರ್ಣಿಕ ನದಿಯಲ್ಲಿ ಮುಳುಗಿ ಕಪಿಲ್ ಸಾವನ್ನಪ್ಪಿದ್ದಾನೆ.
ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಸೌಪರ್ಣಿಕಾ ನದಿಗೆ ಈಜೋದಕ್ಕೆ ತಂಡದ ಜೊತೆಗೆ ಕೇರಳದ ಜೂನಿಯರ್ ಆರ್ಟಿಸ್ಟ್ ಕಪಿಲ್ ತೆರಳಿದ್ದರು. ಇದೀಗ ಅವರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.