Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರಾಚಿ: 80ಕ್ಕೂ ಹೆಚ್ಚು ಬಲಿ ಪಡೆದಿದ್ದ ಮಾಲ್‌ನಲ್ಲಿ ಮತ್ತೆ ಭೀಕರ ಅಗ್ನಿ ಅವಘಡ; ತಪ್ಪದ ಬೆಂಕಿ ಭೀತಿ

23/03/2026 8:30 AM

ಹಾರ್ಮುಜ್ ಜಲಸಂಧಿ ದಾಟಲು ಪ್ರತಿ ಹಡಗಿಗೆ $2 ಮಿಲಿಯನ್ ಸುಂಕ? ವದಂತಿಗಳಿಗೆ ತೆರೆ ಎಳೆದ ಇರಾನ್

23/03/2026 8:19 AM

ಅತ್ಯಾಚಾರ ಸಂತ್ರಸ್ತೆಯ 34 ವಾರಗಳ `ಭ್ರೂಣ ಗರ್ಭಪಾತ’ಕ್ಕೆ ಕರ್ನಾಟಕ ಹೈಕೋರ್ಟ್ ನಕಾರ !

23/03/2026 8:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದು ಪಾಕ್ ಗೆ ಅಷ್ಟೆ ಅಲ್ಲ, ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಎಚ್ಚರಿಕೆ ಗಂಟೆ : ಸಿಎಂ ಗುಡುಗು
KARNATAKA

ಇದು ಪಾಕ್ ಗೆ ಅಷ್ಟೆ ಅಲ್ಲ, ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಎಚ್ಚರಿಕೆ ಗಂಟೆ : ಸಿಎಂ ಗುಡುಗು

By kannadanewsnow0507/05/2025 3:29 PM

ಬೆಂಗಳೂರು : ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಲ್ಲಿ ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿd ಅವರು, ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ, ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ಧ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ.

ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ.ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ.

ಆಪರೇಷನ್ ಸಿಂಧೂರ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ.

ಕಾಶ್ಮೀರದ ಪಹಲ್ಗಾವ್‌ನಲ್ಲಿ ಅಮಾಯಕ 26ಜನ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ.ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ.

ಉಗ್ರರ ಮೇಲಿನ ದಾಳಿ ಹಿನ್ನೆಲೆಯಲ್ಲಿ ಸಂವಿಧಾನ ಉಳಿಸಿ ಅಡಿಯಲ್ಲಿ ರಾಯಚೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿದೆ.ಉಗ್ರರ ನೆಲೆಗಳ ಮೇಲೆ ಸೇನಾದಾಳಿ ನಡೆಸದೆ ಭಾರತದ ಮುಂದೆ ಬೇರೆ ಆಯ್ಕೆಗಳಿರಲಿಲ್ಲ. ಪಹಲ್ಗಾಮ್ ನಲ್ಲಿ ನಡೆದ ಹತ್ಯಾಕಾಂಡ ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ ಪಾಕಿಸ್ತಾನ ಇದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ ಕಾರಣದಿಂದಾಗಿ ಭಾರತಕ್ಕೂ ಈ ದಾಳಿ ನಡೆಸದೆ ಬೇರೆ ಆಯ್ಕೆಗಳಿರಲಿಲ್ಲ.

ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ.ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ.

ಉಗ್ರಗಾಮಿಗಳ ನೆಲೆಯನ್ನೇ ಕೇಂದ್ರವಾಗಿಟ್ಟುಕೊಂಡು ಅಮಾಯಕ ಜನರ ಸಾವು-ನೋವು ನಡೆಯದಂತೆ ದಾಳಿ ನಡೆಸಿರುವ ನಮ್ಮ ಸೈನಿಕರ ಕಾರ್ಯಕ್ಷಮತೆ ಮತ್ತು ಪರಿಣತಿಗೆ ನನ್ನದೊಂದು ದೊಡ್ಡ ಸಲಾಮ್. ಭಾರತ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ ಸಂಪೂರ್ಣ ಬೆಂಬಲಿಸಿದೆ. ನಾನು ಕೂಡಾ ನಮ್ಮ ಸರ್ಕಾರ ಮತ್ತು ರಾಜ್ಯದ ಪರವಾಗಿ ಸಂಪೂರ್ಣ ಬೆಂಬಲ ಘೋಷಿಸುತ್ತಿದ್ದೇನೆ.

ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ. ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ.ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು.

* ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

* ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ… pic.twitter.com/dOHS2LkGO3

— Siddaramaiah (@siddaramaiah) May 7, 2025

Share. Facebook Twitter LinkedIn WhatsApp Email

Related Posts

ಅತ್ಯಾಚಾರ ಸಂತ್ರಸ್ತೆಯ 34 ವಾರಗಳ `ಭ್ರೂಣ ಗರ್ಭಪಾತ’ಕ್ಕೆ ಕರ್ನಾಟಕ ಹೈಕೋರ್ಟ್ ನಕಾರ !

23/03/2026 8:17 AM1 Min Read

ಮಕ್ಕಳು ವಿದ್ಯಾಭ್ಯಾಸ ಮತ್ತು ನೈತಿಕತೆಯಲ್ಲಿ ಉನ್ನತಿ ಸಾಧಿಸಲು ಈ ಹೂವನ್ನು ಪೂಜಿಸುವುದರಿಂದ ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ!

23/03/2026 8:04 AM3 Mins Read

ವಾಹನ ಸವಾರರಿಗೆ ಬಿಗ್ ಶಾಕ್ : ಏಪ್ರಿಲ್ 1ರಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ `ಟೋಲ್ ದರ’ ಏರಿಕೆ

23/03/2026 7:50 AM1 Min Read
Recent News

ಕರಾಚಿ: 80ಕ್ಕೂ ಹೆಚ್ಚು ಬಲಿ ಪಡೆದಿದ್ದ ಮಾಲ್‌ನಲ್ಲಿ ಮತ್ತೆ ಭೀಕರ ಅಗ್ನಿ ಅವಘಡ; ತಪ್ಪದ ಬೆಂಕಿ ಭೀತಿ

23/03/2026 8:30 AM

ಹಾರ್ಮುಜ್ ಜಲಸಂಧಿ ದಾಟಲು ಪ್ರತಿ ಹಡಗಿಗೆ $2 ಮಿಲಿಯನ್ ಸುಂಕ? ವದಂತಿಗಳಿಗೆ ತೆರೆ ಎಳೆದ ಇರಾನ್

23/03/2026 8:19 AM

ಅತ್ಯಾಚಾರ ಸಂತ್ರಸ್ತೆಯ 34 ವಾರಗಳ `ಭ್ರೂಣ ಗರ್ಭಪಾತ’ಕ್ಕೆ ಕರ್ನಾಟಕ ಹೈಕೋರ್ಟ್ ನಕಾರ !

23/03/2026 8:17 AM

ಮಕ್ಕಳು ವಿದ್ಯಾಭ್ಯಾಸ ಮತ್ತು ನೈತಿಕತೆಯಲ್ಲಿ ಉನ್ನತಿ ಸಾಧಿಸಲು ಈ ಹೂವನ್ನು ಪೂಜಿಸುವುದರಿಂದ ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ!

23/03/2026 8:04 AM
State News
KARNATAKA

ಅತ್ಯಾಚಾರ ಸಂತ್ರಸ್ತೆಯ 34 ವಾರಗಳ `ಭ್ರೂಣ ಗರ್ಭಪಾತ’ಕ್ಕೆ ಕರ್ನಾಟಕ ಹೈಕೋರ್ಟ್ ನಕಾರ !

By kannadanewsnow5723/03/2026 8:17 AM KARNATAKA 1 Min Read

ಬೆಂಗಳೂರು : ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿರುವ ಅಪ್ರಾಪ್ತ ಸಂತ್ರಸ್ತೆಯ 34 ವಾರಗಳ ಭ್ರೂಣದ ಗರ್ಭಪಾತಕ್ಕೆ ಅನುಮತಿ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.…

ಮಕ್ಕಳು ವಿದ್ಯಾಭ್ಯಾಸ ಮತ್ತು ನೈತಿಕತೆಯಲ್ಲಿ ಉನ್ನತಿ ಸಾಧಿಸಲು ಈ ಹೂವನ್ನು ಪೂಜಿಸುವುದರಿಂದ ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ!

23/03/2026 8:04 AM

ವಾಹನ ಸವಾರರಿಗೆ ಬಿಗ್ ಶಾಕ್ : ಏಪ್ರಿಲ್ 1ರಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ `ಟೋಲ್ ದರ’ ಏರಿಕೆ

23/03/2026 7:50 AM
BREAKING NEWS

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ನಾಲ್ವರು ಬಸ್ ಪ್ರಯಾಣಿಕರು ಸಾವು!

23/03/2026 7:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.