ಬೆಂಗಳೂರು : ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶಗಳಲ್ಲಿರುವ ಭಯೋತ್ಪಾದಕರ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ನಮ್ಮ ಭಾರತೀಯ ಸೈನಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಸಾಧನೆಗೊಂದು ದೊಡ್ಡ ಸಲಾಂ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಕೇಂದ್ರ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ, ನಮ್ಮ ಸರಕಾರ ಸಂಪೂರ್ಣ ಬೆಂಬಲಿಸಿದೆ. ದೇಶದ ಭದ್ರತೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೂ ನಮ್ಮ ಬೆಂಬಲ ಇದ್ದೇ ಇರುತ್ತದೆ ಎಂದು ಮೊದಲೇ ಹೇಳಿದ್ದೆವು. ಮುಂದೆಯೂ ಕೇಂದ್ರ ಸರ್ಕಾರದೊಂದಿಗೆ ನಮ್ಮ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಇರಲಿದೆ ಎಂದು ಹೇಳಿದರು.
ಭಯೋತ್ಪಾದಕರ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಸಾಹಸ ಮೆಚ್ಚುವಂಥದ್ದು, ಈ ಮೂಲಕ ಪಹಲ್ಗಾಮ್ ದಾಳಿಯಿಂದ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ ಸಿಕ್ಕಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನಮ್ಮ ಸರ್ಕಾರ ಕಟ್ಟುನಿಟ್ಟಿನ ಎಚ್ಚರ ವಹಿಸಿದೆ. ಭಯೋತ್ಪಾದನೆ ಎಂಬ ಪೀಡುಗಿನ ವಿರುದ್ಧ ಎಲ್ಲರೂ ಒಗ್ಗಟಾಗಿ ಹೋರಾಡೋಣ ಎಂದು ಸಚಿವರು ಹೇಳಿದ್ದಾರೆ.
BREAKING: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಒಬ್ಬರೇ ಒಬ್ಬ ನಾಗರೀಕ ಮೃತಪಟ್ಟಿಲ್ಲ: ರಾಜನಾಥ್ ಸಿಂಗ್