ನವದೆಹಲಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಪ್ರದೇಶಗಳನ್ನು ಗುರಿಯಾಗಿಸಿ ಭಾರತದಿಂದ ಆಪರೇಷನ್ ಸಿಂದೂರ ಕಾರ್ಯಾಚರಣೆ ಬೆನ್ನಲ್ಲೇ ಶ್ರೀನಗರ, ಪಠಾಣ್ ಕೋಟ್, ಲೇಹ್, ಜಮ್ಮು, ಚಂಡೀಗಢ, ಜೋಧಪುರ, ಶಿಮ್ಲಾ ಸೇರಿ 25 ವಿಮಾನ ನಿಲ್ದಾಣಗಳನ್ನು ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕ ಬಂದ್ ಮಾಡಲಾಗಿದೆ.
ಇದರ ಜತೆಗೇ ವಿಮಾನಯಾನ ಸಂಸ್ಥೆಗಳು ಕೂಡ ಅನೇಕ ಮಾರ್ಗಗಳಲ್ಲಿ ಹಾರಾಟ ನಿಲ್ಲಿಸಿವೆ. ಇದರಿಂದ 300 ವಿಮಾನಗಳ ಸಂಚಾರ ರದ್ದಾಗಿದೆ. ಪಾಕಿಸ್ತಾನದಲ್ಲಿನ ಭಯೋತ್ಪಾದಕ ದಾಳಿ ಬೆನ್ನಲ್ಲೇ ಭಾರತೀಯ ವಿಮಾನಯಾನ ಸಂಸ್ಥೆಯು ಶ್ರೀನಗರ ಸೇರಿದಂತೆ ಉತ್ತರ ಭಾರತದ ಕೆಲವು ನಿಲ್ದಾಣಗಳನ್ನು ಸೇನಾ ಕಾರ್ಯಾಚರಣೆಗಾಗಿ ಮುಚ್ಚಲಾಗಿದೆ.
ಇನ್ನು ದೆಹಲಿ ವಿಮಾನ ನಿಲ್ದಾಣದಿಂದ ಕನಿಚ್ಛ 35 ವಿಮಾನಗಳು ರದ್ದಾಗಿವೆ. ಅಮೆರಿಕನ್ ಏರ್‌ಲೈನ್ಸ್ ಸೇರಿದಂತೆ ವಿದೇಶಿ ವಿಮಾನಯಾನ ಸಂಸ್ಥೆಗಳು ದೆಹಲಿ ವಿಮಾನ ನಿಲ್ದಾಣದಿಂದ ತಮ್ಮ ಸೇವೆಗಳನ್ನು ರದ್ದುಗೊಳಿಸಿದೆ. ಸೈಸ್‌ಜೆಟ್ ಸದ್ಯದ ಪರಿಸ್ಥಿತಿಯ ಕಾರಣದಿಂದ ಧರ್ಮಶಾಲಾ, ಲೇಹ್, ಜಮ್ಮು, ಶ್ರೀನಗರ ಮತ್ತ ಅಮೃತಸರ ನಿಲ್ದಾಣಗಳು ಮುಂದಿನ ಸೂಚನೆ ಬರುವ ತನಕ ಮುಚ್ಚಲಾಗಿದೆ ಎಂದು ಹೇಳಿದೆ.
ಮೇ 10ರ ತನಕ 9 ನಿಲ್ದಾಣಗಳಿಗೆ ಏರ್ ಇಂಡಿಯಾ ಹಾರಾಟವಿಲ್ಲ. ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ಮೇ 10ರ ತನಕ ಶ್ರೀನಗರ, ಅಮೃತಸರ ಸೇರಿದಂತೆ 9 ವಿಮಾನ ನಿಲ್ದಾಣಗಳಿಗೆ ಹಾರಾಟ ರದ್ದುಗೊಳಿಸಿದೆ. ಜಮ್ಮು, ಶ್ರೀನಗರ, ಲೇಹ್, ಜೋಧಪುರ, ಅಮೃತಸರ, ಭುಜ್, ಜಾಮನಗರ, ಚಂಡೀಗಢ, ರಾಜ್‌ಕೋಟ್ ನಿಲ್ದಾಣಗಳಿಗೆ ಶನಿವಾರ ತನಕ ವಿಮಾನ ಸ್ಥಗಿತಗೊಳಿಸಿರುವುದಾಗಿ ಹೇಳಿದೆ.