ರಾಯಚೂರು : ರಾಯಚೂರಿನಲ್ಲಿ ಘೋರವಾದ ದುರಂತ ಸಂಭವಿಸಿದ್ದು, RTPS ಘಟಕದಲ್ಲಿ ವಿದ್ಯುತ್ ಸ್ಪರ್ಶಿಸಿ ಓರ್ವ ಕಾರ್ಮಿಕ ಸಾವನಪ್ಪಿದ್ದಾನೆ. ರಾಯಚೂರು ತಾಲೂಕಿನ ಶಕ್ತಿನಗರ ಬಳಿ ಇರುವ ಆರ್ ಟಿ ಪಿ ಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಈ ಘಟನೆ ನಡೆದಿದೆ.
ವಾಟರ್ ಕ್ಲಾರಿಫೈರ್ ಕ್ಲೀನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಕಾರ್ಮಿಕ ತಿಮ್ಮಾರೆಡ್ಡಿ (28) ಸಾವನಪ್ಪಿದ್ದು ಇನ್ನುಳಿದ ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ರಂಗಪ್ಪ ಹನುಮೇಶ್ ಮತ್ತು ವೀರೇಶ್ ಗೆ ಆರ್‌ಟಿಪಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಯಾವುದೇ ಸುರಕ್ಷತೆ ನೀಡದೆ ಕೆಲಸಕ್ಕೆ ಹಚ್ಚಿದ್ದಾರೆ. ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮೃತ ತಿಮ್ಮಾರೆಡ್ಡಿ ಕಾರ್ಮಿಕನ ಕುಟುಂಬಸ್ಥರು ಆಗ್ರಹಿಸಿದ್ದಾರೆ. ರಾಯಚೂರು ತಾಲೂಕಿನ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.