ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಪಕ್ಕದ ಮನೆಯವರ ಮೇಲಿನ ದ್ವೇಷಕ್ಕೆ ಬಾಲಕನನ್ನು ಅಪಹರಿಸಿ, ಕೊಲೆಗೈದಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಬಾಲಕ ರಮಾನಂದ (8) ನನ್ನು ಕಿಡ್ನಾಪ್ ಮಾಡಿ ಭೀಕರವಾಗಿ ಕೊಲೆ ಮಾಡಲಾಗಿದೆ. ಪಕ್ಕದ ಮನೆಯ ನಿವಾಸಿ ಮತ್ತೂರು ಎಂಬಾತನಿಂದ ಈ ಒಂದು ಕೃತ್ಯ ನಡೆದಿದೆ. ಬಾಲಕ ರಮಾನಂದ ಕುಟುಂಬ ಮತ್ತು ಮತ್ತೂರು ಕುಟುಂಬದ ನಡುವೆ ಗಲಾಟೆ ಆಗಿತ್ತು. ಗಲಾಟೆ ಹಿನ್ನೆಲೆಯಲ್ಲಿ ಬಾಲಕ ರಮಾನಂದನ್ನು ಅಪಹರಿಸಿ ಕೊಲೆಗಯ್ಯಲಾಗಿದೆ.
ಕೊಲೆಯ ಬಳಿಕ ಆರೋಪಿ ಮತ್ತೂರು ಮೃತದೇಹವನ್ನು ಚೀಲದಲ್ಲಿ ಕಟ್ಟಿ ಕೆರೆಯಲ್ಲಿ ಬಿಸಾಕಿದ್ದಾನೆ. ನೆನ್ನೆ ರಾಯಸಂದ್ರ ಕೆರೆಯ ಬಳಿ ಬಾಲಕನ ಮೃತದೇಹ ಪತ್ತೆಯಾಗಿದೆ. ಆರೋಪಿ ಮತ್ತೂರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.