ನವದೆಹಲಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಭಾಗೀರಥಿ ನದಿಯ ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಗರ್ವಾಲ್ ವಿಭಾಗೀಯ ಆಯುಕ್ತ ವಿನಯ್ ಶಂಕರ್ ಪಾಂಡೆ ಅವರನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.
ಉತ್ತರಕಾಶಿ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಅಪಘಾತದ ಬಗ್ಗೆ ಮಾತನಾಡಿದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, “ಎಸ್ಡಿಆರ್ಎಫ್ ಮತ್ತು ಜಿಲ್ಲಾಡಳಿತದ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಗಳಿಗಾಗಿ ತಕ್ಷಣ ಸ್ಥಳಕ್ಕೆ ತಲುಪಿವೆ. ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಮತ್ತು ಅಪಘಾತದ ಬಗ್ಗೆ ತನಿಖೆ ನಡೆಸುವಂತೆ ನಾನು ಆಡಳಿತಕ್ಕೆ ಸೂಚನೆ ನೀಡಿದ್ದೇನೆ” ಎಂದು ಅವರು ಹೇಳಿದರು.
ಉಚಿತ ಸುದ್ದಿ ಪಡೆದುಕೊಳ್ಳುವುದಕ್ಕೆ ನಮ್ಮ ವಾಟ್ಸಪ್ ಗುಂಪು ಸೇರಿಕೊಳ್ಳಿ
https://chat.whatsapp.com/IrUCOvj6lb9BOTe0MLkeaY
Uttarakhand | Five passengers dead, two seriously injured in a helicopter crash near Ganganani in Uttarkashi district, confirms Garhwal Divisional Commissioner Vinay Shankar Pandey.
Administration and relief teams are present at the helicopter crash site.
(Photo source:… pic.twitter.com/JKoYpq7z1Q
— ANI (@ANI) May 8, 2025