ಹಾವೇರಿ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಲಾರಿಗೆ ಹಿಂದಿನಿಂದ ವೇಗವಾಗಿ ಬಂದಂತಹ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೂಟೆಬೆನ್ನೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹರಿಯಾಣ ಮೂಲದ ಆಡಿ ಎ6 ಕಾರಿನಲ್ಲಿದ್ದ ಆರು ಜನರು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದಲ್ಲಿ ಅಪಘಾತ ಸಂಭವಿಸಿದೆ.ಇನ್ನು ಅಪಘಾತದಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬ್ಯಾಡಿಗೆ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.