ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ನಿಖರ ಮತ್ತು ಸಂಘಟಿತ ಮಿಲಿಟರಿ ಪ್ರತಿಕ್ರಿಯೆಯಾದ ಆಪರೇಷನ್ ಸಿಂಧೂರ್ ನಂತರ ಒಗ್ಗಟ್ಟನ್ನು ಪ್ರಸ್ತುತಪಡಿಸಬೇಕು. ಈ ನಿರ್ಣಾಯಕ ಕ್ಷಣದಲ್ಲಿ ಪ್ರತಿಯೊಬ್ಬ ಭಾರತೀಯರು ಒಗ್ಗಟ್ಟಿನಿಂದ ನಿಲ್ಲಬೇಕಾಗಿದೆ ಎಂದು ಪ್ರಧಾನಿ ಒತ್ತಿ ಹೇಳಿದರು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಬಳಿಕ ಸಚಿವ ರಾಜನಾಥ ಸಿಂಗ್ ಆಪರೇಷನ್ ಸಿಂಧೂರ ಕುರಿತು ಮಾಹಿತಿ ನೀಡಿದ್ದು, ಆಪರೇಷನ್ ಸಿಂಧೂರ ಕಾರ್ಯಾಚರಣೆ ಮುಗಿದಿಲ್ಲ ಇನ್ನೂ ಇದೆ ಎಂದು ಸರ್ವಪಕ್ಷಗಳ ಸಭೆಯಲ್ಲಿ ಸಚಿವ ರಾಜನಾಥ ಸಿಂಗ್ ಮಾಹಿತಿ ನೀಡಿದರು. ಪಾಕಿಸ್ತಾನ ಉಗ್ರರ ನೆಲೆಗಳ ಮೇಲೆ ಮತ್ತಷ್ಟು ದಾಳಿ ನಡೆಸುವ ಸಾಧ್ಯತೆ ಇದೆ. ಸಿಂಧೂರ ಕಾರ್ಯಾಚರಣೆ ಅಡಿ ಮತ್ತಷ್ಟು ಕ್ಷಿಪಣಿ ದಾಳಿ ಸಾಧ್ಯತೆ ಇದೆ. ಆಪರೇಷನ್ ಸಿಂಧೂರ ಕಾರ್ಯಚರಣೆ ಮುಂದುವರೆಯುತ್ತೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಮಾಹಿತಿ ನೀಡಿದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಪ್ರಮುಖ ಕ್ಯಾಬಿನೆಟ್ ಸಚಿವರು ಭಾಗವಹಿಸಿದ್ದರು.
ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಟಿಎಂಸಿಯ ಸುದೀಪ್ ಬಂಡೋಪಾಧ್ಯಾಯ, ಡಿಎಂಕೆಯ ಟಿಆರ್ ಬಾಲು, ಎಸ್ಪಿಯ ರಾಮ್ ಗೋಪಾಲ್ ಯಾದವ್, ಎಎಪಿಯ ಸಂಜಯ್ ಸಿಂಗ್, ಶಿವಸೇನೆ (ಯುಬಿಟಿ) ಸಂಜಯ್ ರಾವತ್, ಎನ್ಸಿಪಿ (ಎಸ್ಪಿ) ಯ ಸುಪ್ರಿಯಾ ಸುಳೆ, ಎಐಎಂಐಎಂನ ಅಸಾದುದ್ದೀನ್ ಒವೈಸಿ ಮತ್ತು ಬಿಜೆಡಿಯ ಸಸ್ಮಿತ್ ಪಾತ್ರಾ ಸೇರಿದಂತೆ ಪ್ರತಿಪಕ್ಷದ ನಾಯಕರು ಭಾಗವಹಿಸಿದ್ದರು.