ನವದೆಹಲಿ: ಟ್ರೇಡ್ ಮಾರ್ಕ್ ನೋಂದಣಿ ವಿಚಾರವಾಗಿ ದೇಶದ ಪ್ರತಿಷ್ಠಿತ ಕಂಪನಿಯಾದ ರಿಲಯನ್ಸ್ ಇಂಡಸ್ಟ್ರೀಸ್ ಪ್ರಮುಖ ಪ್ರಕಟಣೆಯೊಂದನ್ನು ಗುರುವಾರ ನೀಡಿದೆ. ಭಾರತೀಯರ ಶೌರ್ಯದ ಸಂಕೇತವಾಗಿ ರಾಷ್ಟ್ರೀಯ ಪ್ರಜ್ಞೆಯ ಭಾಗವಾಗಿ ಇರುವ “ಆಪರೇಷನ್ ಸಿಂಧೂರ್” ಅನ್ನು ಟ್ರೇಡ್ಮಾರ್ಕ್ ಮಾಡುವ ಉದ್ದೇಶವನ್ನು ಹೊಂದಿಲ್ಲ ಎಂದು ಕಂಪನಿ ತಿಳಿಸಿದೆ.
ರಿಲಯನ್ಸ್ ಇಂಡಸ್ಟ್ರೀಸ್ನ ಘಟಕವಾದ ಜಿಯೋ ಸ್ಟುಡಿಯೋಸ್ ತನ್ನ ಟ್ರೇಡ್ಮಾರ್ಕ್ ಅರ್ಜಿಯನ್ನು ಹಿಂತೆಗೆದುಕೊಂಡಿದ್ದು, ಇದನ್ನು ಕಂಪನಿಯ ಕಿರಿಯ ಸ್ಥಾನದಲ್ಲಿ ಇರುವ ವ್ಯಕ್ತಿಯೊಬ್ಬರು ಅನುಮತಿಯಿಲ್ಲದೆ, ಅಜಾಗರೂಕತೆಯಿಂದ ಟ್ರೇಡ್ ಮಾರ್ಕ್ ಗೆ ಅರ್ಜಿ ಸಲ್ಲಿಸಿದ್ದರು.
ಪಹಲ್ಗಾಮ್ನಲ್ಲಿ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ನಡೆದ ಆಪರೇಷನ್ ಸಿಂಧೂರ್ ಬಗ್ಗೆ ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಅದರ ಎಲ್ಲ ಪಾಲುದಾರರು ಬಹಳ ಹೆಮ್ಮೆಪಡುತ್ತಾರೆ. ಭಯೋತ್ಪಾದನೆಯ ಹೀನಕೃತ್ಯದ ವಿರುದ್ಧ ಭಾರತದ ರಾಜೀ ಆಗದ ಹೋರಾಟದಲ್ಲಿ ನಮ್ಮ ಧೈರ್ಯಶಾಲಿ ಸಶಸ್ತ್ರ ಪಡೆಗಳ ಹೆಮ್ಮೆಯ ಸಾಧನೆ ಆಪರೇಷನ್ ಸಿಂಧೂರ್ ಆಗಿದೆ.
ಭಯೋತ್ಪಾದನೆಯ ವಿರುದ್ಧದ ಈ ಹೋರಾಟದಲ್ಲಿ ರಿಲಯನ್ಸ್ ಸಮೂಹವು ನಮ್ಮ ಸರ್ಕಾರ ಮತ್ತು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಬೆಂಬಲ ನೀಡುತ್ತದೆ. ‘ಭಾರತ ಮೊದಲು’ ಎಂಬ ಧ್ಯೇಯವಾಕ್ಯಕ್ಕೆ ನಮ್ಮ ಬದ್ಧತೆ ಅಚಲವಾಗಿದೆ ಎಂದು ತಿಳಿಸಲಾಗಿದೆ.
Reliance Industries has no intention of trademarking Operation Sindoor, a phrase which is now a part of the national consciousness as an evocative symbol of Indian bravery. Jio Studios, a unit of Reliance Industries, has withdrawn its trademark application, which was filed… pic.twitter.com/Nxwic58pf7
— ANI (@ANI) May 8, 2025
ಪಾಕಿಸ್ತಾನ ಚೀನಾದ ಜೆಟ್ ಗಳನ್ನು ಬಳಸಿಲ್ಲ: ಚೀನಾ ವಿದೇಶಾಂಗ ಸಚಿವ | operation sindoor
BREAKING : ಪಾಕಿಸ್ತಾನದ 12 ಕಡೆ ಡ್ರೋನ್ ದಾಳಿಯಲ್ಲಿ ಹಲವರು ಸಾವು : ತುರ್ತು ಸಭೆ ಕರೆದ ಪ್ರಧಾನಿ ಶೆಹಬಾಜ್ ಶರೀಫ್.!