ಧರ್ಮಶಾಲಾ : ಪಾಕಿಸ್ತಾನ ಸೇನೆಯು ಜಮ್ಮು ಸೇರಿದಂತೆ ದೇಶದ ಹಲವು ನಗರಗಳ ಮೇಲೆ ಡ್ರೋನ್ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಇಂದು ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಐಪಿಎಲ್ ಪಂದ್ಯವನ್ನು ರದ್ದು ಮಾಡಲಾಗಿದೆ.
ಇಂದು ಧರ್ಮಶಾಲಾದಲ್ಲಿ ನಡೆಯುತ್ತಿದ್ದ ದೆಹಲಿ ಮತ್ತು ಪಂಜಾಬ್ ನಡುವಿನ ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆ.
ಪಾಕಿಸ್ತಾನವು ಜಮ್ಮು ಸೇರಿದಂತೆ ದೇಶದ ಹಲವು ಭಾಗಗಳ ಮೇಲೆ ದಾಳಿ ಮಾಡಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಎಲ್ಲಾ ಆಟಗಾರರು ಡ್ರೆಸ್ಸಿಂಗ್ ಕೋಣೆಗೆ ಮರಳಿದ್ದಾರೆ ಮತ್ತು ಫ್ಲಡ್‌ಲೈಟ್‌ಗಳನ್ನು ಸಹ ಆಫ್ ಮಾಡಲಾಗಿದೆ. ಧರ್ಮಶಾಲಾದಲ್ಲಿ ಸಂಪೂರ್ಣ ವಿದ್ಯುತ್ ಕಡಿತಗೊಂಡಿದೆ. ಪಾಕಿಸ್ತಾನವು ಜಮ್ಮುವಿನ ಹಲವು ಭಾಗಗಳ ಮೇಲೆ ದಾಳಿ ಮಾಡಿದೆ. ಅದೇ ಸಮಯದಲ್ಲಿ, ಪಾಕಿಸ್ತಾನವು ರಾಜಸ್ಥಾನದ ಜೈಸಲ್ಮೇರ್ ಮೇಲೆ ಡ್ರೋನ್ ಮೂಲಕ ದಾಳಿ ಮಾಡಿದೆ. ಆದರೆ, ಭಾರತೀಯ ಸೇನೆ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದೆ.