ವಿಜಯಪುರ : ಆಪರೇಷನ್ ಸಿಂಧೂರದ ಮೂಲಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಆದರೂ ಸಹ ಪಾಕಿಸ್ತಾನ ಗಡಿಯಲ್ಲಿ ಮತ್ತೆ ಮತ್ತೆ ಬಾಲ ಬಿತ್ತುತ್ತಿದೆ. ಇದೀಗ ಕರ್ನಾಟಕದಲ್ಲಿ ಕೂಡ ಹಲವು ಪಾಕಿಸ್ತಾನಿ ಪ್ರೇಮಿಗಳು ಬಾಲ ಬಿಚ್ಚಿದ್ದು, ವಿಜಯಪುರದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಪಾಕಿಸ್ತಾನದ ಪರವಾಗಿ ಪೋಸ್ಟ್ ಮಾಡಿದ್ದು ಆಕೆಯ ವಿರುದ್ಧ ಇದೀಗ ದೇಶದ್ರೋಹದ ಅಡಿ ಪ್ರಕರಣ ದಾಖಲಾಗಿದೆ.
ಹೌದು ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪಾಕಿಸ್ತಾನದ ಜನರ ಪರ ಹಾಗೂ ಅವರ ಸುರಕ್ಷತೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ದೇಶ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ತಷಾವುದ್ದ ಫಾರೂಖಿ ಶೇಖ್ ಎಂಬ ವಿದ್ಯಾರ್ಥಿನಿ ಪಾಕಿಸ್ತಾನದ ಪರ ಪೋಸ್ಟ್ ಹರಿಬಿಟ್ಟಿದ್ದಾಳೆ.ಇದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್ ‘@hoodyyyyyyy’ ಎಂಬ ಹೆಸರಿನ ಖಾತೆಯಲ್ಲಿ “ನನ್ನ ಪಾಕಿಸ್ತಾನಿ ಸ್ನೇಹಿತರಿಗೆ, ಐಒಜೆಕೆ, ಎಜೆಕೆ ಜನರು ಸರ್ಕಾರಿ ಮಿಲಿಟರಿ ಸ್ಥಳಗಳಿಗೆ ಹೋಗಬೇಡಿ. ಗಡಿಯಿಂದ 200 ಕಿಲೋ ಮೀಟರ್ ಹೋಗಬೇಡಿ. ಅಲ್ಲಾ ಪಾಕಿಸ್ತಾನ ಹಾಗೂ ನಮ್ಮೆಲ್ಲರನ್ನೂ ಭಾರತದಿಂದ ರಕ್ಷಿಸಲಿ ಅಮೀನ್#sos” ಎಂದು ದೇಶ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ತನ್ನ ವಾಟ್ಸಾಪ್ ಸ್ಟೇಟಸ್‌ಗಳಲ್ಲಿ ಕೂಡ ಪೋಸ್ಟ್ ಹಾಕಿದ್ದಾಳೆ.