ಬೆಂಗಳೂರು : ಪಹಲ್ಗಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದ್ರು ಸಹ ಪಾಕಿಸ್ತಾನ ತನ್ನ ಚಾಳಿ ಬಿಟ್ಟಿಲ್ಲ. ಮತ್ತೆ ಮತ್ತೆ ಗಡಿಯಲ್ಲಿ ಶೆಲ್ ದಾಳಿ ನಡೆಸುತ್ತಿದೆ. ಇನ್ನು ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಈ ಒಂದು ಕಾಳಗದ ಮಧ್ಯ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ಈ ವಿಚಾರವಾಗಿ ಅಂತವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಬೆಂಗಳೂರಲ್ಲಿ ಕಮಿಷನರ್ ಬಿ.ದಯಾನಂದ್ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಿಷನರ್ ದಯಾನಂದ್,ಭಾರತದ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆ ಆಗಿವೆ. ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಸಿಬ್ಬಂದಿಗಳಿಗೆ ಹಲವು ಸೂಚನೆ ನೀಡಲಾಗಿದೆ ನಗರದ ಎಲ್ಲಾ ಕಡೆಗೆ ಸೂಕ್ತ ಆಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಹೇಳಿಕೆ ನೀಡಿದರು.