ಶ್ರೀನಗರ : ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಪಾಕಿಸ್ತಾನದ ದಾಳಿಗೆ ಭಾರತ ತಕ್ಕ ಪ್ರತ್ಯುತ್ತರ ನೀಡಿ ಈಗಾಗಲೇ ಪಾಕಿಸ್ತಾನಕ್ಕೆ ನುಗ್ಗಿ ಭಾರತ ಸೇನೆ ತಕ್ಕ ಪಾಠ ಕಲಿಸಿದೆ. ಆದರೂ ಕೂಡ ಪಾಕಿಸ್ತಾನ ತನ್ನ ಬುದ್ಧಿ ಬಿಡದೆ ಮತ್ತೆ ಗಡಿಯಲ್ಲಿ ಶೆಲ್ ದಾಳಿ ನಡೆಸುತ್ತಿದೆ. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಇಂದು ಮತ್ತು ನಾಳೆ 2 ದಿನಗಳ ಕಾಲ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹೌದು ಭಾರತ ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇಂದು ಮತ್ತು ನಾಳೆ ರಜೆ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಮತ್ತು ನಾಳೆ ಜಮ್ಮು-ಕಾಶ್ಮೀರದಲ್ಲಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಶಿಕ್ಷಣ ಸಚಿವೆ ಸಕೀನಾ ಇಟೂ ಈ ಕುರಿತು ಹೇಳಿಕೆ ನೀಡಿದ್ದಾರೆ.