ಬೆಂಗಳೂರು : ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಸ್ಥಿತಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತೋಟಭದ್ರತೆ ಒದಗಿಸಲಾಗಿದೆ.
ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಏರ್ಪೋರ್ಟ್ ನಲ್ಲಿ ಇದೀಗ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಏರ್ಪೋರ್ಟ್ ಭದ್ರತಾ ಪಡೆ CISF ಸಿಬ್ಬಂದಿಯಿಂದ ಸೂಕ್ತ ಭದ್ರತೆ ಒದಗಿಸಲಾಗಿದೆ.
ವಿಮಾನ ನಿಲ್ದಾಣದಲ್ಲಿ ಶಸ್ತ್ರ ಸಜ್ಜಿತವಾಗಿ ರೌಂಡ್ಸ್ ಹಾಕುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತವಾಗಿ ಕ್ರಮ ಕೈಗೊಳ್ಳಲಾಗಿದೆ. ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.