ನವದೆಹಲಿ: ಪಾಕಿಸ್ತಾನ ಭಾರತದ ಗಡಿ ನಿಯಂತ್ರಣ ರೇಖೆಯಲ್ಲಿ ನಡೆಸಿದಂತ ಗುಂಡಿನ ಚಕಮಕಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ. ಶ್ರೀ ಸತ್ಯ ಸಾಯಿ ಜಿಲ್ಲೆಯ ಪೆನುಕೊಂಡ ವಿಧಾನಸಭಾ ಕ್ಷೇತ್ರದ ಗೋರಂಟ್ಲಾ ಮಂಡಲದ ಸಮರ್ಪಿತ ಸೈನಿಕ ನಾಯಕ್ (27) ದೇಶದ ರಕ್ಷಣೆಗಾಗಿ ಹೋರಾಡುವಾಗ ಹುತಾತ್ಮರಾಗಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಪೋಸ್ಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದು, “ದೇಶದ ರಕ್ಷಣೆಯಲ್ಲಿ ಶ್ರೀ ಸತ್ಯ ಸಾಯಿ ಜಿಲ್ಲೆಯ ಪೆನುಕೊಂಡ ವಿಧಾನಸಭಾ ಕ್ಷೇತ್ರದ ಗೋರಂಟ್ಲಾ ಮಂಡಲದ ಮುರಳಿ ನಾಯಕ್ ಎಂಬ ಸೈನಿಕ ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ದುಃಖವಾಗಿದೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮ ಮುರಳಿ ನಾಯಕ್ ಅವರಿಗೆ ಗೌರವ ನಮನಗಳು. ಅವರ ಕುಟುಂಬ ಸದಸ್ಯರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
BREAKING: ಪೂಂಚ್ ನಲ್ಲಿ ಪಾಕ್ ಸೇನೆ ದಾಳಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಬಲಿ: ಕೇಂದ್ರ ಸರ್ಕಾರ
BREAKING: ಭಾರತ-ಪಾಕ್ ಉದ್ವಿಗ್ನತೆ: ಮೇ.10ರವರೆಗೆ ಹಲವು ನಗರಗಳಿಗೆ ವಿಮಾನ ಹಾರಾಟ ರದ್ದುಗೊಳಿಸಿದ ಇಂಡಿಗೋ








