ಬೆಂಗಳೂರು: ಮಾನಸಿಕ ಅಸ್ವಸ್ಥ ನಿರಾಶ್ರಿತರಿಗೆ ಉತ್ತಮ ಮಾನಸಿಕ ಆರೋಗ್ಯ ಸೇವೆಗಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳೂಂದಿಗೆ ಪುನರ್ವಸತಿಯನ್ನು ಒದಗಿಸಲು ಆಸಕ್ತ ಸರ್ಕಾರೇತರ ಸಂಸ್ಥೆಗಳಿಂದ/ಸ್ವಯಂಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ಇಲಾಖೆಯ ವೈಬ್ ಸೈಟ್ www.kpp.karnatka.gov.in ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 9ರ ಸಂಜೆ 5.30ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಾನಸಿಕ ಆರೋಗ್ಯಕಾರ್ಯಕ್ರಮ ಅಧಿಕಾರಿಗಳ ಕಛೇರಿ ಎಂ.ಎಂ.ರಸ್ತೆ ಫ್ರೆಜರ್ ಟೌನ್, ಬೆಂಗಳೂರು, ಕಛೇರಿಯ ಸಮಯದಲ್ಲಿ ಸಂರ್ಪಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ