ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿ ಪ್ರಕಟಿಸಲಾಗಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗಳನ್ನು ಹೊರಡಿಸಲು ಮತ್ತು ಸದರಿ ಮಾರ್ಗಸೂಚಿಯನ್ನು ಪರಿಷ್ಕರಿಸಲು ಹಾಗೂ ವರ್ಗಾವಣಾ ಅವಧಿಯನ್ನು ವಿಸ್ತರಿಸಲು ಮಾನ್ಯ ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ ವಿವರಿಸಿದರು.
ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ ದಿ:15.05.2025 ರಿಂದ 14.06.2025 ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್ ‘ಸಿ’ ಮತ್ತು ‘ಡಿ’ ವೃಂಧದ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಲು ಪ್ರಸ್ತಾಪಿಸಲಾಗಿದೆ.
ಅಂಗವಿಕಲರಿಗೆ ಗುಡ್ ನ್ಯೂಸ್: ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ