ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ಸೂಪರ್ ಸ್ಪೆಷಾಲಿಟಿ ವೈದ್ಯರುಗಳ ವಯೋನಿವೃತ್ತಿ ವಯಸ್ಸನ್ನು 60 ರಿಂದ 65 ವರ್ಷಕ್ಕೆ ಹೆಚ್ಚಿಸಲು; ಸಚಿವ ಸಂಪುಟ ನಿರ್ಧರಿಸಿದೆ ಎಂದು ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಶುಕ್ರವಾರ (ಮೇ.09) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಬಳಿಕ ಈ ಬಗ್ಗೆ ಮಾಧ್ಯಮಗಳಿಗೆ ಅವರು ಮಾಹಿತಿ ನೀಡಿದರು.