ನವದೆಹಲಿ : ಈಗಾಗಲೇ ಆಪರೇಷನ್ ಸಿಂಧೂರ ಮೂಲಕ ಭಾರತ ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ. ಆದರೂ ಪಾಕಿಸ್ತಾನ ಪದೇ ಪದೇ ಕಾಲು ಕೆದರಿಕೊಂಡು ಜಗಳ ತೆಗೆಯುತ್ತಿದ್ದು ಇದೀಗ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಭಯೋತ್ಪಾದನೆ ವಿರುದ್ಧ ಕೇಂದ್ರ ಸರ್ಕಾರ ಇದೀಗ ಯುದ್ಧ ಸಾರಿದೆ.
ಹೌದು ಇಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹಾಗೂ ಎಲ್ಲಾ ಸೇನಾ ಮುಖ್ಯಸ್ಥರ ಜೊತೆಗೆ ನರೇಂದ್ರ ಮೋದಿಯವರು ಮಹತ್ವದ ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ. ಭಯೋತ್ಪಾದನೆ ವಿರುದ್ಧ ಭಾರತ ಯುದ್ಧ ಸಾರಿದೆ. ಯಾವುದೇ ಉಗ್ರರ ದಾಳಿಯನ್ನು ಇದೀಗ ಯುದ್ಧ ಎಂದು ಪರಿಗಣಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಉಗ್ರರ ದಾಳಿಯನ್ನು ಯುದ್ಧ ಎಂದು ಪರಿಗಣಿಸಲು ಕೇಂದ್ರ ಸರ್ಕಾರ ಇದೀಗ ಮಹತ್ವದ ನಿರ್ಧಾರ ಕೈಗೊಂಡಿದೆ. ಪಾಕಿಸ್ತಾನ ಹಾಗೂ ಉಗ್ರರಿಗೆ ಕೇಂದ್ರ ಸರ್ಕಾರ ಈ ಮೂಲಕ ಖಡಕ್ ಸಂದೇಶ ರವಾನಿಸಿದೆ.
ಉಗ್ರರ ಸಂಹಾರ ಮಾಡುವವರೆಗೂ ಯುದ್ಧ ನಿಲ್ಲುವುದಿಲ್ಲ ಎಂದು ಪ್ರಧಾನಿ ಮೋದಿ ಪಾಕಿಸ್ತಾನಕ್ಕೆ ಮತ್ತು ಉಗ್ರರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇನ್ನು ಮುಂದೆ ಯಾವುದೇ ದಾಳಿಯಾದರೂ ಅದನ್ನು ಭಯೋದ್ಪಾದನೆಯನ್ನು ಪರಿಗಣಿಸುತ್ತೇವೆ. ಆಪರೇಷನ್ ಸಿಂಧೂರ ಮುಂದುವರಿಸುವ ಸುಳಿವು ಇದೀಗ ಪ್ರಧಾನಿ ಮೋದಿ ನೀಡಿದ್ದಾರೆ.
ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ಭಾರತದ ವಿರುದ್ಧದ ಯುದ್ಧ ಕೃತ್ಯವೆಂದು ಪರಿಗಣಿಸಲಾಗುವುದು ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುವುದು ಎಂದು ಭಾರತ ನಿರ್ಧರಿಸಿದೆ. ಪಾಕಿಸ್ತಾನ ಎರಡು ದಿನಗಳ ಕಾಲ ಡ್ರೋನ್ ಮತ್ತು ಕ್ಷಿಪಣಿ ದಾಳಿಗೆ ಪ್ರಯತ್ನಿಸಿದ ನಂತರ ಇದು ಬಂದಿದೆ, ಇದನ್ನು ವಿದೇಶಾಂಗ ಸಚಿವಾಲಯವು ತೀವ್ರ ಮತ್ತು ಪ್ರಚೋದನಕಾರಿ ಎಂದು ಬಣ್ಣಿಸಿದೆ.