ನವದೆಹಲಿ : ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಇದೀಗ ದೆಹಲಿಯ ಏರ್ ಪೋರ್ಟ್ ನಲ್ಲಿ 60 ದೇಶೀಯ ವಿಮಾನಗಳ ಹಾರಾಟ ಸ್ಥಗಿತಗೊಳಿಸಿ ಆದೇಶಿಸಲಾಗಿದೆ.
ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ವಿಮಾನ ಹಾರಾಟ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ಇದೀಗ ದೆಹಲಿಯ ಏರ್ಪೋರ್ಟ್ ನಲ್ಲಿ 60 ದೇಶೀಯ ವಿಮಾನಗಳ ಹಾರಾಟ ಬಂದ್ ಗೆ ಆದೇಶ ಲಾಗಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು ಈ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಬಂದ್ ಗೆ ಆದೇಶ ನೀಡಲಾಗಿದೆ.