ನವದೆಹಲಿ: ಅಗ್ನಿಶಾಮಕ ದಳದ ಕೇಂದ್ರಗಳು ದಿನದ 24ಗಂಟೆ ಸನ್ನದ್ಧ ಸ್ಥಿತಿಯಲ್ಲಿರಬೇಕು. ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು, ಸಹಾಯವಾಣಿ ಆರಂಭಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ.
ಇಂದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ನಾಗರೀಕರ ರಕ್ಷಣಾ ಕಾರ್ಯಚಟುವಟಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳು , ಎಲ್ಲಾ ಮಹಾನಗರಗಳ ಆಯುಕ್ತರು, ಜಿಲ್ಲಾಧಿಕಾರಿಗಳು , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆದರು.
ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರಬೇಕು. ಈ ಕುರಿತು ರಾಜ್ಯ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಮಾರ್ಗಸೂಚಿಯನ್ನು ಸಿದ್ಧಪಡಿಸಬೇಕು. ಪ್ರಮುಖ ಸ್ಥಳಗಳಲ್ಲಿ Mock Drill ಮಾಡಲು ಸೂಚನೆ ನೀಡಿದರು.
ರಾಷ್ಟ್ರೀಯ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆಯನ್ನು ಕಾಪಾಡಲು ಸೂಚಿಸಿದಂತ ಅವರು, ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು. ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ವಹಿಸಬೇಕು. ವದಂತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಫ್ಯಾಕ್ಟ್ ಚೆಕ್ ನಿರಂತರವಾಗಿ ಮಾಡಬೇಕು. ಸುಳ್ಳು ಸುದ್ದಿ ಬಗ್ಗೆ ಮೂಲದಲ್ಲೇ ಅಧಿಕೃತ ಸ್ಪಷ್ಟೀಕರಣ ನೀಡಬೇಕು. ಗುಪ್ತಚರ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. ಸಾರ್ವಜನಿಕ ಸೇವೆ ಒದಗಿಸುವ ತಾಣಗಳಲ್ಲಿ ಹೆಚ್ಚಿನ ಸುರಕ್ಷತೆಯನ್ನು ಖಾತ್ರಿಪಡಿಸಬೇಕು. ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ, ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಬೇಕು ಎಂಬುದಾಗಿ ಹೇಳಿದರು.
ಅಗ್ನಿಶಾಮಕ ದಳದ ಕೇಂದ್ರಗಳು ದಿನದ 24ಗಂಟೆ ಸನ್ನದ್ಧ ಸ್ಥಿತಿಯಲ್ಲಿರಬೇಕು. ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು, ಸಹಾಯವಾಣಿ ಆರಂಭಿಸಬೇಕು. ಪೌರ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿ, ಅವರಿಗೆ ಸೂಕ್ತ ತರಬೇತಿಯನ್ನು ಒದಗಿಸಬೇಕು. ಎಲ್ಲಾ ಜಿಲ್ಲೆಗಳಲ್ಲಿ ಪೌರ ರಕ್ಷಣಾ ವ್ಯವಸ್ಥೆಗೆ ಸ್ವಯಂಸೇವಕರನ್ನು ನೇಮಕ ಮಾಡುವ ಕಾರ್ಯ ಆರಂಭಿಸಬೇಕು. ಆನ್ಲೈನ್ನಲ್ಲಿ ಹೆಸರು ನೋಂದಾಯಿಸಲು ವ್ಯವಸ್ಥೆ ಕಲ್ಪಿಸಬೇಕು. ಕರಾವಳಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕು. ಎಲ್ಲಾ ಪ್ರಮುಖ ಸ್ಥಳಗಳಲ್ಲಿ ನಿರಂತರ ಗಸ್ತು ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಂಡು ದೇಶದ, ರಾಜ್ಯದ ಸಹಭಾಳ್ವೆಗೆ ಧಕ್ಕೆ ತರುವ, ಕೋಮುಭಾವನೆ ಕೆರಳಿಸಿ, ಕೋಮು ವಿಭಜನೆ ತರಲು, ದೇಶದ ಭದ್ರತೆಗೆ ಅಪಾಯ ತರಲು ಷಡ್ಯಂತ್ರ ನಡೆಸುತ್ತಿರುವ ಎಲ್ಲರ ಪಟ್ಟಿ ಸಿದ್ದಪಡಿಸಿ ಕಾನೂನು ಕ್ರಮಕ್ಕೆ ಒಳಪಡಿಸಲು ಎಲ್ಲಾ DC , SP ಗಳು ಕ್ರಮ ವಹಿಸಬೇಕು ಎಂಬುದಾಗಿ ತಿಳಿಸಿದರು.
ಕೋಮು ಸಾಮರಸ್ಯ ಕದಡುವ ಪ್ರಯತ್ನಗಳ ಮೇಲೆ ನಿಗಾ ಇರಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕೋಮು ಗೂಂಡಾಗಳ ಪಟ್ಟಿಯನ್ನು update ಮಾಡಬೇಕು. ಅವರ ಮೇಲೆ ನಿಗಾ ಇಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗೃಹ ಸಚಿವರಾದ. ಡಾ ಜಿ ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ ಖರ್ಗೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ರೇವಣ್ಣ, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ , ನಗರ ಪೊಲೀಸ್ ಆಯುಕ್ತರಾದ ದಯಾನಂದ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.
BREAKING: ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಿಸಲು ಸಮ್ಮತಿಸಿವೆ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್
BREAKING: ಇನ್ಮುಂದೆ ಯಾವುದೇ ಉಗ್ರರ ದಾಳಿಯನ್ನು ಯುದ್ಧವೆಂದು ಪರಿಗಣಿಸಲು ಭಾರತ ನಿರ್ಧಾರ