ನವದೆಹಲಿ: ಅಮೆರಿಕದ ಮಧ್ಯಸ್ಥಿಕೆಯ ನಂತರ ಭಾರತ ಮತ್ತು ಪಾಕಿಸ್ತಾನ “ಪೂರ್ಣ ಮತ್ತು ತಕ್ಷಣದ ಕದನ ವಿರಾಮ”ಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಹೇಳಿದ್ದಾರೆ. ಯುದ್ಧ ಮಾಡುತ್ತಿರುವ ರಾಷ್ಟ್ರಗಳು ತಟಸ್ಥ ಸ್ಥಳದಲ್ಲಿ ವ್ಯಾಪಕವಾದ ವಿಷಯಗಳ ಕುರಿತು ಮಾತುಕತೆಗಳನ್ನು ಪ್ರಾರಂಭಿಸುತ್ತವೆ ಎಂದು ಅಮೆರಿಕ ಹೇಳಿದೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ರಾತ್ರಿಯ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು ಎಂದು ಟ್ರಂಪ್ ಹೇಳಿದ್ದಾರೆ.
— Donald J. Trump (@realDonaldTrump) May 10, 2025
ಈ ಪೋಸ್ಟ್ ಅನ್ನು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಕೂಡ ಹಂಚಿಕೊಂಡಿದ್ದಾರೆ. ಅವರು ಈ ಹಿಂದೆ ಅಮೆರಿಕ “ಮೂಲಭೂತವಾಗಿ ನಮ್ಮ ವ್ಯವಹಾರವಲ್ಲ” ಎಂದು ಹೇಳಿದ್ದರು.