ಬೆಂಗಳೂರು : ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಆಸ್ತಿ ತೆರಿಗೆ ಶೇ.5 ರ ರಿಯಾಯತಿಯನ್ನು ಜೂನ್ 30 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ಹೌದು, 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಆಸ್ತಿ ತೆರಿಗೆಯ ಶೇಕಡ 5ರ ರಿಯಾಯಿತಿ ಅವಧಿಯನ್ನು 2025ರ ಜೂನ್ 30 ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
ಆಸ್ತಿ ಮಾಲೀಕರು ತಮ್ಮ ಮನೆ, ನಿವೇಶನಗಳಿಗೆ ಸಕಾಲದಲ್ಲಿ ತೆರಿಗೆಯನ್ನು ಪಾವತಿಸಿ, ಶೇಕಡ 5ರ ರಿಯಾಯಿತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರವು ಪ್ರಕಟಣೆಯಲ್ಲಿ ತಿಳಿಸಿದೆ.