ನವದೆಹಲಿ : ಆಪರೇಷನ್ ಸಿಂಧೂರ್ ಮೂಲಕ ಭಾರತೀಯ ಸೇನೆ ನಡೆಸಿದ ವಾಯುದಾಳಿಯಲ್ಲಿ ಪಾಕಿಸ್ತಾನದ ವಾಯುಸೇನೆಯ ಉಸ್ಮಾನ್ ಯೂಸೂಫ್ ಸೇರಿದಂತೆ 50 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಭಾರತೀಯ ಸೇನೆಯು ನಡೆಸಿದ ಕ್ಷಿಪಣಿ ದಾಳಿಯಲ್ಲಿ ಪಾಕಿಸ್ತಾನ ವಾಯುಪಡೆಯ ಉಸ್ಮಾನ್ ಹಾಗೂ ನಾಲ್ವರು ವಾಯುಪಡೆಯ ಸಿಬ್ಬಂದಿಗಳು ಸೇರಿದಂತೆ 50 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಭಾರತೀಯ ಸೇನೆಯು ಪಾಕಿಸ್ತಾನದ ವಾಯುಪಡೆ ಟಾರ್ಗೆಟ್ ಮಾಡಿ ದಾಳಿ ಮಾಡಿದ್ದು, ಪಾಕಿಸ್ತಾನದ ಹಲವು ಯುದ್ಧ ವಿಮಾನಗಳು ಧ್ವಂಸವಾಗಿವೆ ಎಂದು ವರದಿಯಾಗಿದೆ.