ರಾಯಚೂರು : ರಾಜ್ಯದಲ್ಲಿ ದಿನೇ ದಿನೇ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ರಾಯಚೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 4 ವರ್ಷದ ಬಾಲಕಿಯ ಮೇಲೆ ಸಂಬಂಧಿಕ ಯುವಕನೇ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ.
ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿ, ಆರೋಪಿಯ ಮನೆಯೊಳಗೆ ಹೋಗಿದ್ದಾಳೆ. ಇದನ್ನೇ ದುರುಪಯೋಗಪಡಿಸಿಕೊಂಡ ದುರುಳ ಯುವಕ, ಬಾಲಕಿಗೆ 5 ರೂಪಾಯಿ ಹಣ ನೀಡಿ, ಪುಸಲಾಯಿಸಿ ಅತ್ಯಾಚಾರವೆಸಗಿದ್ದಾನೆ. ಮರುದಿನ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದೆ.
ತಕ್ಷಣ ಪೊಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಈ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಬಳಗಾನೂರು ಠಾಣೆಯಲ್ಲಿ ಪೋಕ್ಸೊ ಅಡಿ ಎಫ್‌ಐಆರ್ ದಾಖಲಾಗಿದೆ.