ಚಾಮರಾಜನಗರ: ಅನಾರೋಗ್ಯದಿಂದ ಬಳಲುತ್ತಿದ್ದಂತ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರ ಪುತ್ರ ಚಾಮರಾಜ್(42) ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿರುವುದಾಗಿ ತಿಳಿದು ಬಂದಿದೆ.
ತೀವ್ರ ಅನಾರಾರೋಗ್ಯದ ಕಾರಣದಿಂದಾಗಿ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರ ಪುತ್ರ ಚಾಮರಾಜ್ ಅವರು ಕಳೆದ ಒಂದೂವರೆ ತಿಂಗಳಿನಿಂದ ಮಣಿಪಾಲ್ ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಇಂದು ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರ ಪುತ್ರ ಚಾಮರಾಜ್ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಮೃತ ಚಾಮರಾಜ್ ಅವರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಇಂದು ಸಂಜೆ 6 ಗಂಟೆಗೆ ಚಾಮರಾಜನಗರ ಯಳಂದೂರು ತಾಲ್ಲೂಕಿನ ಸ್ವಗ್ರಾಮವಾದ ಉಪ್ಪಿನಮೋಳೆಯಲ್ಲಿ ಚಾಮರಾಜ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಉಪ್ಪಿನಮೋಳೆಯಲ್ಲಿ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
BREAKING: ಭಾರತ-ಪಾಕ್ ಕದನ ವಿರಾಮ: ನಾಳೆಯಿಂದ ಜಮ್ಮು ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನರಾರಂಭ
ಇಲ್ಲಿ ಕರ್ನಾಟಕದ ಜಿಲ್ಲಾ, ತಾಲ್ಲೂಕು ವಾರು ಪ್ರವಾಸಿ ಸ್ಥಳಗಳ ಮಾಹಿತಿ ಲಭ್ಯ | Karnataka Explore